ರಾಷ್ಟ್ರೀಯ ಆರೋಗ್ಯ ಮಿಷನ್ ನೌಕರರ ವಿರುದ್ಧ ಎಸ್ಮಾ ಜಾರಿ

ಬೆಂಗಳೂರು,ಮಾ.19- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಆರೋಗ್ಯ ಮಿಷನ್ ನೌಕರರ ವಿರುದ್ಧ ರಾಜ್ಯ ಸರ್ಕಾರ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ(ಎಸ್ಮಾ) ಜಾರಿ ಮಾಡಿದೆ. 48 ಗಂಟೆಯೊಳಗೆ ಪ್ರತಿಭಟನೆಯನ್ನು ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಸರ್ಕಾರದ ಮನವಿಗೂ ಜಗ್ಗದ ಹಿನ್ನಲೆಯಲ್ಲಿ ಪ್ರತಿಭಟನಾನಿರತ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿ ಕರ್ತವ್ಯ ನಿರ್ವಹಿಸುತ್ತಿರುವ ನೌಕರರ ವಿರುದ್ಧ ಎಸ್ಮಾ ಜಾರಿಗೊಳಿಸಿದೆ. ಆರೋಗ್ಯ ಇಲಾಖೆ ಸಿಬ್ಬಂದಿ ಒಂದು ತಿಂಗಳನಿಂದ ಪ್ರತಿಭಟನೆ ಮುಂದುವರೆಸಿರುವುದು […]