IMA ಹಗರಣ : IPS ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ..
ಬೆಂಗಳೂರು, ಫೆ.17- ಬಹುಕೋಟಿ ಐಎಂಎ ಹಗರಣದಲ್ಲಿ ಆರೋಪಿಗಳಾಗಿರುವ ಐಪಿಎಸ್ ಅಧಿಕಾರಿಗಳ ವಿರುದ್ಧವೂ ಮುಲ್ಲಾಜಿಲ್ಲದೆ ಕ್ರಮ ಜರುಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ನ ಪ್ರಶ್ನೋತ್ತರದ ವೇಳೆ ಬಿಜೆಪಿ ಸದಸ್ಯ ಎನ್,ರವಿಕುಮಾರ್ ಅವರು ವಿಷಯ ಪ್ರಸ್ತಾಪಿಸಿ, ಐಎಂಎ ಹಗರಣದಲ್ಲಿ ಕೆಳ ಹಂತದ ಅಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ. ಹಿರಿಯ ಅಧಿಕಾರಿಗಳ ವಿರುದ್ಧ ಯಾವ ಕ್ರಮವನ್ನು ತೆಗೆದುಕೊಂಡಿಲ್ಲ ಎಂದು ಆಕ್ಷೇಪಿಸಿದರು. ಇದಕ್ಕೆ ಉತ್ತರ ನೀಡಿದ ಮುಖ್ಯಮಂತ್ರಿ ಅವರು, ಹಗರಣದಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. […]