ಆಟೋ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ಮಂಡಳಿ ರಚಿಸಲು ಆಗ್ರಹ

ಬೆಂಗಳೂರು, ಫೆ.15- ರಾಜ್ಯದಲ್ಲಿನ ಆಟೋರಿಕ್ಷಾ ಚಾಲಕರ ಶ್ರೇಯೋಭಿವೃದ್ಧಿಗೆ ಪ್ರತ್ಯೇಕ ನಿಗಮ ಅಥವಾ ಮಂಡಳಿ ರಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವಿಧಾನಸಭೆಯಲ್ಲಿಂದು ಆಗ್ರಹಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ರಾಜ್ಯದಲ್ಲಿ 10 ಲಕ್ಷಕ್ಕೂ ಹೆಚ್ಚು ಆಟೋ ಚಾಲಕರಿದ್ದು, ಬಡ ಮಧ್ಯಮ ವರ್ಗದ ಜನರು, ಆಟೋರಿಕ್ಷಾವನ್ನು ಅವಲಂಬಿಸಿದ್ದಾರೆ. ಆದರೆ, ಆಟೋರಿಕ್ಷಾ ಚಾಲಕರಿಗೆ ಇಎಸ್ಐ, ಪಿಎಫ್, ಪಿಂಚಣಿ ಸೇರಿದಂತೆ ಯಾವುದೇ ಸೌಲಭ್ಯವಿಲ್ಲ. ರಿಕ್ಷಾ ಚಾಲಕರು ಎಲ್ಲಾ ಜಾತಿ ವರ್ಗದವರು ಇದ್ದಾರೆ. […]