ಜೈಲುಗಳಲ್ಲಿ ಅಕ್ರಮ ತಡೆಯಲು ಕಠಿಣ ಕ್ರಮ : ಗೃಹ ಸಚಿವ ಜ್ಞಾನೇಂದ್ರ

ಬೆಂಗಳೂರು,ಜ.20- ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಕಾರಾಗೃಹ ಸಿಬ್ಬಂದಿ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ರಾಮನಗರ, ತುಮಕೂರು, ಕಲಬುರಗಿ ಹಾಗೂ ಬೆಳಗಾವಿ ಕಾರಾಗೃಹಗಳಲ್ಲಿ ಕೆಲವು ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಯಾಗಿದ್ದು, ಇದರ ಬಗ್ಗೆ ವಿಸ್ತೃತ ತನಿಖೆಗೆ ಆದೇಶ ನೀಡಿದ್ದು, ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್ ಪ್ರವೀಣ್ ಎಂಬುವವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದರು. ಹಾಸನ ಜಿಲ್ಲಾ ಕಾರಾಗೃಹದ ಮೇಲೆ […]