ವಿಶ್ವಪ್ರಸಿದ್ಧ ಜಂಬೂಸವಾರಿಗೆ ಗಜಪಡೆ ತಾಲೀಮು ಆರಂಭ

ಮೈಸೂರು,ಆ.14- ನಗರದ ಅರಮನೆ ಆವರಣದಿಂದ ಬನ್ನಿಮಂಟಪದವರೆಗೂ ಪ್ರತಿ ದಿನ ಬೆಳಗ್ಗೆ – ಸಂಜೆ ತಾಲೀಮು ನಡೆಸುವುದು ವಾಡಿಕೆ. ಅಂತೆಯೇ ಇಂದು ತಾಲೀಮು ಆರಂಭಕ್ಕೂ ಮುನ್ನ ಅರಮನೆ ಅವರಣದಲ್ಲಿ ಆನೆಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕೋರೋನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಅರಮನೆ ಆವರಣದಲ್ಲಿಯೇ ಆನೆಗಳ ತಾಲೀಮು ನಡೆಸಲಾಗಿತ್ತು. ಈ ಬಾರಿ ಎಂದಿನಂತೆ ಅರಮನೆಯಿಂದ ಬನ್ನಿ ಮಂಟಪದವರೆಗೆ ಗಜಪಡೆಗಳು ವಾಯುವಿಹಾರಕ್ಕೆ ತೆರಳುತ್ತಿದೆ. ಇಂದಿನಿಂದ ದಸರಾ ಗಜಪಡೆ ತಾಲೀಮು ಆರಂಭವಾಗಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ 9 ಆನೆಗಳು ಅರಮನೆಯಿಂದ ಹೊರಟು […]