ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ : ಬೊಮ್ಮಾಯಿ

ಹುಬ್ಬಳ್ಳಿ,ಡಿ.4- ರಾಜ್ಯದಲ್ಲಿ ಬಿಜೆಪಿಯ ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ. ಡಿಸೆಂಬರ್ ತಿಂಗಳಲ್ಲಿ ಇದನ್ನು ಇನ್ನಷ್ಟು ತೀವ್ರಗೊಳಿಸಿ ಜನರ ವಿಶ್ವಾಸ ಪಡೆಯುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆ ವರ್ಷ ಇರುವುದರಿಂದ ಪ್ರತಿ ಬಾರಿಯಂತೆ ಜನರ ಬಳಿ ಹೋಗುತ್ತಿದ್ದೇವೆ. ನಮ್ಮ ಜನ ಸಂಕಲ್ಪ ಯಾತ್ರೆ ಈಗಾಗಲೇ ಕಲ್ಯಾಣ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದಲ್ಲಿ ನಡೆದಿದೆ. ಜನ ಸಂಕಲ್ಪ ಯಾತ್ರೆಯನ್ನು ತೀವ್ರಗೊಳಿಸುತ್ತೇವೆ ಎಂದರು. ಇದರ […]