ಸಕ್ರಿಯ ರಾಜಕಾರಣಕ್ಕೆ ಮಾಜಿ ಸಚಿವ ಜನಾರ್ಧನರೆಡ್ಡಿ..?

ಬೆಂಗಳೂರು,ಫೆ.3-ಉಪಮುಖ್ಯಮಂತ್ರಿ ಸ್ಥಾನ ಗಿಟ್ಟಿಸಲು ದೆಹಲಿಗೆ ಹಾರಿರುವ ಸಾರಿಗೆ ಸಚಿವ ಶ್ರೀರಾಮುಲು, ತಮ್ಮ ಪರಮಾಪ್ತ ಹಾಗೂ ಮಾಜಿ ಸಚಿವ ಜನಾರ್ಧನರೆಡ್ಡಿಯನ್ನು ಬಿಜೆಪಿಗೆ ಸೇರ್ಪಡಿಸಲು ತೆರೆಮರೆಯಲ್ಲಿ ಲಾಬಿ ಆರಂಭಿಸಿದ್ದಾರೆ. ಪ್ರಸ್ತುತ ದೆಹಲಿಯಲ್ಲಿರುವ ರಾಮುಲು, ನಿನ್ನೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಕೆಲಸದ ನಿಮಿತ್ತ ನಾನು ಬಂದಿದ್ದೇನೆ ಎಂದು ರಾಮುಲು ಹೇಳಿದರಾದರೂ ಜನಾರ್ಧನರೆಡ್ಡಿಯನ್ನು ಬಿಜೆಪಿಗೆ ಕರೆತರಲು ಅವರು ವರಿಷ್ಠರ ಬೇಟಿಗೆ ಬಂದಿದ್ದಾರೆ ಎಂಬ ವದಂತಿ ಬಿಜೆಪಿಯಲ್ಲಿ ಹಬ್ಬಿದೆ. ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ […]