ಶ್ರೀಕೃಷ್ಣ ಜನ್ಮಾಷ್ಟಮಿ ವೇಳೆ ಕಾಲ್ತುಳಿತ, ಇಬ್ಬರ ಸಾವು
ಮಥುರಾ,ಆ.21-ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಸಂದರ್ಭದಲ್ಲಿ ನೂಕುನುಗ್ಗಲು, ಕಾಲ್ತುಳಿತ ಉಂಟಾಗಿ ಇಬ್ಬರು ಭಕ್ತರು ಸಾವನ್ನಪ್ಪಿ, ಹಲವರು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ಮಥುರಾದಲ್ಲಿ ಸಂಭವಿಸಿದೆ. ಮೃತರನ್ನು ನೋಯ್ಡಾ ನಿವಾಸಿ ನಿರ್ಮಲಾದೇವಿ, ಜಬಲ್‍ಪುರ ನಿವಾಸಿ ರಾಜ್‍ಕುಮಾರ್ ಎಂದು ಗುರುತಿಸಲಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕೃಷ್ಣ ಜನ್ಮಸ್ಥಳ ಉತ್ತರಪ್ರದೇಶದ ಮಥುರಾದಲ್ಲಿ ನಿನ್ನೆ ವಿಜೃಂಭಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಿನ್ನೆ ಮಥುರಾದಲ್ಲಿ ಭಾರೀ ಸಡಗರ ಸಂಭ್ರಮ ಮನೆ ಮಾಡಿತ್ತು. ದೇಗುಲಕ್ಕೆ ದೇಶ-ವಿದೇಶಗಳಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಕಾಲಿಡುವುದಕ್ಕೂ ಸಹ ಜಾಗವಿಲ್ಲದಂತೆ ಭಕ್ತರು ನೆರೆದಿದ್ದರು. […]