ಹುಬ್ಬಳ್ಳಿಯಲ್ಲಿ ಬೃಹತ್ ಜನೋತ್ಸವ ಆಯೋಜಿಸಿ ಪ್ರಧಾನಿ ಆಹ್ವಾನಿಸಲು ಮುಂದಾದ ಬಿಜೆಪಿ

ಬೆಂಗಳೂರು,ಆ.11- ಪಕ್ಷ ಹಾಗೂ ಸರ್ಕಾರದಲ್ಲಿ ಉಂಟಾಗಿರುವ ಗೊಂದಲಗಳನ್ನು ನಿವಾರಿಸಿ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಲು ಮುಂದಾಗಿರುವ ಬಿಜೆಪಿ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ರಾಜ್ಯಾದ್ಯಂತ ಜನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಮುಂದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಪಕ್ಷದ ಎಲ್ಲ ಪ್ರಮುಖ ನಾಯಕರು, ಸಚಿವರು, ಶಾಸಕರು, ಪದಾಧಿಕಾರಿಗಳು ಸೇರಿದಂತೆ ಪ್ರತಿಯೊಬ್ಬರು ಪಾಲ್ಗೊಳ್ಳಲಿದ್ದಾರೆ. ರಾಜ್ಯದ ಸುಮಾರು 100ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಜನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಅಂತಿಮವಾಗಿ ದಾವಣಗೆರೆ […]