ಜಂತರ್‌ಮಂತರ್‌ನಲ್ಲಿ ಕೆ.ಕವಿತಾ ಉಪವಾಸ ಸತ್ಯಾಗ್ರಹ

ನವದೆಹಲಿ,ಮಾ.10-ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸುವಂತೆ ಒತ್ತಾಯಿಸಿ ಭಾರತ್ ರಾಷ್ಟ್ರ ಸಮಿತಿ ಪಕ್ಷದ ಹಿರಿಯ ನಾಯಕಿ ಕೆ.ಕವಿತಾ ಅವರು ಜಂತರ್‌ಮಂತರ್‌ನಲ್ಲಿ ಇಂದು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ರಾಷ್ಟ್ರ ರಾಜಧಾನಿಯ ಜಂತರ್ ಮಂತರ್‍ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೆ ಅವರು ಪ್ರತಿಭಟನೆಯ ಹಾದಿ ಹಿಡಿದಿರುವುದು ಕುತೂಹಲ ಕೆರಳಿಸಿದೆ. ಈದ್ಗಾ […]

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ದೆಹಲಿಯಲ್ಲಿ ರೈತರ ಬೃಹತ್ ರ‍್ಯಾಲಿ

ಬೆಂಗಳೂರು,ಆ.21- ಎಲ್ಲಾ ಕೃಷಿ ಉತ್ಪನ್ನಗಳ ಕನಿಷ್ಠ ಬೆಂಬಲ ಬೆಲೆ ಖಾತ್ರಿ ಕಾನೂನು ಜಾರಿಗೆ ತರಬೇಕು, ಡಾ ಸ್ವಾಮಿನಾಥನ್ ವರದಿಯಂತೆ ಬೆಂಬಲ ಬೆಲೆ ನಿಗದಿಯಾಗಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ನಾಳೆ ದೆಹಲಿಯ ಜಂತರ್‍ಮಂತರ್‍ನಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಬೃಹತ್ ರ‍್ಯಾಲಿ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ, ತಮಿಳುನಾಡು ಕೇರಳ ರಾಜ್ಯಗಳಿಂದ ನೂರಾರು ರೈತರು ದೆಹಲಿಯ ಸೇರಿದ್ದಾರೆ ಎಂದು ದಕ್ಷಿಣ ಭಾರತ ರಾಜ್ಯಗಳ ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 2022ರ ವಿದ್ಯುತ್ ಕಾಯ್ದೆ ಖಾಸಗಿಕರಣ […]