ಆದಿಚುಂಚನಗಿರಿ ಕ್ಷೇತ್ರದಲ್ಲಿ ಶ್ರೀ ಗಂಗಾಧರೇಶ್ವರ ಸ್ವಾಮಿ ರಥೋತ್ಸವ

ಮಂಡ್ಯ, ಮಾ.7- ಇತಿಹಾಸ ಪ್ರಸಿದ್ಧ, ಪುಣ್ಯಕ್ಷೇತ್ರ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಶ್ರೀ ಗಂಗಾಧರೇಶ್ವರ ಸ್ವಾಮಿ ಮಹಾರಥೋತ್ಸವ ಹಾಗೂ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಅಡ್ಡಪಲ್ಲಕ್ಕಿ ಉತ್ಸವ ಲಕ್ಷಾಂತರ ಭಕ್ತರ ನಡುವೆ ವಿಜೃಂಭಣೆಯಿಂದ ನೆರವೇರಿತು. ಹೋಳಿ ಹುಣ್ಣಿಮೆಯ ಬ್ರಾಹ್ಮೀ ಮುಹೂರ್ತ 5 ಗಂಟೆಗೆ ಸರಿಯಾಗಿ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ಆದಿಚುಂಚನಗಿರಿಯ ರಥ ಬೀದಿಯಲ್ಲಿ ಸರ್ವಾಲಂಕಾರಗೊಂಡಿದ್ದ ರಥಕ್ಕೆ ಪೂಜೆ ಸಲ್ಲಿಸುವ ಮೂಲಕ ಲಕ್ಷಾಂತರ ಭಕ್ತರ ಹರ್ಷೋದ್ಗಾರದ ನಡುವೆ ಮಹಾ ರಥೋತ್ಸವಕ್ಕೆ ಚಾಲನೆ ನೀಡಿದರು. […]