ಆದಿಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವಕ್ಕೆ ಚಾಲನೆ

ಬೆಂಗಳೂರು,ಫೆ.28-ಇತಿಹಾಸ ಪ್ರಸಿದ್ದ ಆದಿಚುಂಚನಗಿರಿ ಶ್ರೀಕ್ಷೇತ್ರದಲ್ಲಿ ಇಂದಿನಿಂದ ಮಾ.8ರವರೆಗೆ ನಡೆಯಲಿರುವ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆತಿದ್ದು, ನಾಡಿನ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ. ಇಂದು ಬೆಳಗ್ಗೆ 8 ಗಂಟೆಗೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಗಂಗಾಧರೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಪೂಜೆ, ಧ್ವಜ ಪೂಜೆ ಮೂಲಕ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು. ಬಳಿಕ 10 ಗಂಟೆಗೆ ಸಾವಿರಾರು ಭಕ್ತರ ಹರ್ಷೋದ್ಘಾರ ಜೈಕಾರದ ನಡುವೆ ಶ್ರೀ ಕ್ಷೇತ್ರದಲ್ಲಿ ನಂದಿಪೂಜೆ ಸಲ್ಲಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. […]

ನಾಳೆಯಿಂದ ಆದಿಚುಂಚನಗಿರಿಯಲ್ಲಿ ಜಾತ್ರೋತ್ಸವ

ನಾಗಮಂಗಲ,ಫೆ.27- ಆಧ್ಯಾತ್ಮಿಕ ಕ್ಷೇತ್ರ ಶ್ರೀ ಆದಿಚುಂಚನಗಿರಿ ಕ್ಷೇತ್ರದಲ್ಲಿ ನಾಳೆಯಿಂದ ಮಾ.8ರವರೆಗೆ ಜಾತ್ರೋತ್ಸವ ನಡೆಯಲಿದೆ. ನಾಳೆ ಬೆಳಗ್ಗೆ 6 ಗಂಟೆಗೆ ಶ್ರೀಗಂಗಾಧರೇಶ್ವರ ದೇವಾಲಯದಲ್ಲಿ ಪೂಜೆ, ಧಾರ್ಮಿಕ ಕೈಂಕರ್ಯಗಳು ನಡೆದ ನಂತರ 8 ಗಂಟೆಗೆ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಧ್ವಜಾರೋಹಣ ಮಾಡುವುದರ ಮೂಲಕ ಜಾತ್ರೋತ್ಸವಕ್ಕೆ ವಿದ್ಯುಕ್ತ ಚಾಲನೆ ನೀಡಲಿದ್ದಾರೆ. ಮಾ. 1ರಂದು ಮಧ್ಯಾಹ್ನ ಕಬಡಿ ಪಂದ್ಯಾವಳಿ ನಡೆಯಲಿದ್ದು, ಸಂಜೆ 6 ಗಂಟೆಗೆ ಸರ್ವಾಲಂಕೃತ ಚಂದ್ರಮೌಳೇಶ್ವರ ಸ್ವಾಮೀಜಿ ಉತ್ಸವ ನಡೆಯಲಿದ್ದು, ಮಾ. 2ರಂದು ಮಧ್ಯಾಹ್ನ 3 ಗಂಟೆಗೆ ಮಲ್ಲೇಶ್ವರ ಸ್ವಾಮಿ […]