ನೆಹರೂ ಕಾರ್ಯಗಳನ್ನು ಶ್ಲಾಘಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು,ನ.14- ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿರುವ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಪಂಡಿತ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನ ಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನಮ್ಮ ರಾಷ್ಟ್ರದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆ ಯನ್ನಾಗಿ ಆಚರಿಸಿಕೊಂಡು […]