ಜಯದೇವ ಆಸ್ಪತ್ರೆಯ ನಿರ್ದೇಶಕ ಡಾ.ಮಂಜುನಾಥ್ ಸೇವಾವಧಿ ವಿಸ್ತರಣೆ

ಬೆಂಗಳೂರು,ಜು.19- ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಹಾಗೂ ಖ್ಯಾತ ಹೃದಯ ತಜ್ಞ ಡಾ.ಮಂಜುನಾಥ್ ಅವರ ಸೇವಾವಧಿಯನ್ನು ಪುನಃ ಒಂದು ವರ್ಷಕ್ಕೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿರ್ದೇಶಕರಾಗಿ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ ಪುನಃ ಅವರನ್ನೇ ಮುಂದುವರಿಸುವಂತೆ ಕೆಲವರು ಮನವಿ ಮಾಡಿಕೊಂಡಿದ್ದರು. ಹೀಗಾಗಿ ಅವರ ಸೇವಾವಧಿಯನ್ನು ವಿಸ್ತರಿಸಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಖುದ್ದಾಗಿ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ. ಡಾ. ಮಂಜುನಾಥ್ ಸೇವಾವಧಿ ಇಂದಿಗೆ ಮುಕ್ತಾಯಗೊಳ್ಳುತ್ತಿತ್ತು. ತಮ್ಮ ಸೇವಾವ ವಿಸ್ತರಿಸಿದ್ದಕ್ಕೆ ಮುಖ್ಯಮಂತ್ರಿ […]