ನಾಡಪ್ರಭು ಕೆಂಪೇಗೌಡ ದಿನಾಚರಣೆಗೆ ಸರ್ಕಾರದಿಂದ ಎಳ್ಳುನೀರು

ಬೆಂಗಳೂರು,ಡಿ.3- ನಾಡಪ್ರಭು ಕೆಂಪೇಗೌಡ ದಿನಾಚರಣೆಗೆ ಅನುಮತಿ ನೀಡಲು ಸರ್ಕಾರ ಮೀನಾಮೇಷ ಎಣಿಸುತ್ತಿರುವುದು ಕಂಡು ಬಂದಿದೆ. ವರ್ಷಾಂತ್ಯದೊಳಗೆ ನಾಡಪ್ರಭು ಕೆಂಪೇಗೌಡರ ದಿನಾಚರಣೆಗೆ ಅನುಮತಿ ನೀಡುವಂತೆ ಬಿಬಿಎಂಪಿ ಅಧಿಕಾರಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದರೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿವ್ಯ ಮೌನಕ್ಕೆ ಶರಣಾಗಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ. ಪ್ರತಿವರ್ಷ ಬೆಂಗಳೂರು ಕರಗದ ಸಮಯದಲ್ಲೇ ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಬಿಬಿಎಂಪಿ ವತಿಯಿಂದ ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಈ ಬಾರಿ ಅದು ಸಾಧ್ಯವಾಗದ ಹಿನ್ನಲೆಯಲ್ಲಿ ವರ್ಷಾಂತ್ಯದೊಳಗೆ ದಿನಾಚರಣೆ ನಡೆಸಲು ಅನುಮತಿ ನೀಡುವಂತೆ ಬಿಬಿಎಂಪಿಯವರುಸರ್ಕಾರಕ್ಕೆ […]