ಎಸ್‍ಸಿ ಒಳಮೀಸಲಾತಿ ಜಾರಿಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು,ಡಿ.13- ಪರಿಶಿಷ್ಟ ಜಾತಿಗಳ ವರ್ಗೀಕರಣ(ಒಳಮೀಸಲಾತಿ) ಜಾರಿ ಮಾಡುವ ಕುರಿತು ರಾಜ್ಯ ಸರ್ಕಾರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದಲ್ಲಿ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸಮಿತಿಗೆ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷರಾದರೆ ಸಚಿವರಾದ ಗೋವಿಂದ ಎಂ.ಕಾರಜೋಳ, ಎಸ್.ಅಂಗಾರ, ಪ್ರಭು ಚವ್ಹಾಣ್ ಹಾಗೂ ಡಾ.ಕೆ.ಸುಧಾಕರ್ ಅವರು ಸದಸ್ಯರಾಗಿದ್ದಾರೆ. ಈ ಸಮಿತಿಯು ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಸಂಬಂಧ ಪರಿಶೀಲಿಸಿ ಸರ್ಕಾರಕ್ಕೆ ಸೂಕ್ತ ಶಿಫಾರಸ್ಸುಗಳನ್ನು ಮಾಡಬೇಕೆಂದು ಅಧಿಸೂಚನೆಯಲ್ಲಿ ಹೊರಡಿಸಲಾಗಿದೆ. ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಅನುಷ್ಠಾನ ಮಾಡಬೇಕೆಂದು ರಾಜ್ಯಾದ್ಯಂತ ಪರಿಶಿಷ್ಟ […]

ಸರ್ಕಾರದಲ್ಲಿ ಆಡಳಿತ ನಡೆಯುತ್ತಿಲ್ಲ ಎಂದು ಸಚಿವರೇ ಹೇಳಿದ್ದಾರೆ : ಸಿದ್ದರಾಮಯ್ಯ

ಬೆಂಗಳೂರು, ಆ.16- ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಹೇಳಿಕೆ ಆಧರಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಸಿದ್ದರಾಮಯ್ಯ ಮಾತನಾಡಿ, ಮಾಧುಸ್ವಾಮಿ ಒಬ್ಬ ಹಿರಿಯ ಸಚಿವರು. ನಮ್ಮ ಸರ್ಕಾರದಲ್ಲಿ ಆಡಳಿತ ನಡೆಯುತ್ತಿಲ್ಲ. ಸರ್ಕಾರವನ್ನು ತಳ್ಳಿಕೊಂಡು ಹೋಗುತ್ತಿದ್ದೇವೆ ಎಂದಿದ್ದಾರೆ. ಸಚಿವರಾಗಿಯೇ ಮಾಧುಸ್ವಾಮಿ ಈ ಹೇಳಿಕೆ ಕೊಟ್ಟಿದ್ದಾರೆ. ಈ ಸತ್ಯವನ್ನು ಮರೆಮಾಚಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೊಮ್ಮಾಯಿ ಮುಂದಾಗಿದ್ದಾರೆ ಎಂದು ಹೇಳಿದರು. ಕೆಲವು ಸಚಿವರನ್ನುಎತ್ತಿ ಕಟ್ಟಿ ಮುನಿರತ್ನ, ಸೋಮಶೇಖರ್ ಮತ್ತಿತರರಿಂದ ಮಾಧುಸ್ವಾಮಿ ಅವರ ರಾಜೀನಾಮೆ […]

ಪರಿಷತ್‍ನಲ್ಲಿ ಕಾಂಗ್ರೆಸ್‍ನ ಧರಣಿ, ಗದ್ದಲದ ನಡುವೆಯೇ ಮಹತ್ವದ 4 ಮಸೂದೆಗಳು ಅಂಗೀಕಾರ

ಬೆಂಗಳೂರು,ಫೆ.22- ಕಳೆದ 2011ರಲ್ಲಿ ಕೆಪಿಎಸ್‍ಸಿಯಿಂದ ನೇಮಕಗೊಂಡು ಅಧಿಸೂಚನೆ ರದ್ದುಗೊಂಡಿದ್ದರಿಂದ ಅತಂತ್ರಕ್ಕೆ ಸಿಲುಕಿದ 362 ಮಂದಿ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಲು ಅನುಕೂಲವಾಗುವಂತಹ ವಿದೇಯಕವನ್ನು ವಿಧಾನಪರಿಷತ್‍ನಲ್ಲಿಂದು ಅಂಗೀಕರಿಸಲಾಯಿತು. ಕಾಂಗ್ರೆಸ್‍ನ ಧರಣಿ, ಗದ್ದಲ, ಗಲಾಟೆಯ ನಡುವೆಯೂ ಸಚಿವರು ವಿಧಾನಸಭೆಯಿಂದ ಅಂಗೀಕಾರಗೊಂಡಿದ್ದ ನಾಲ್ಕು ಮಹತ್ವದ ಮಸೂದೆಗಳನ್ನು ಪರಿಷತ್‍ನಲ್ಲಿ ಮಂಡಿಸಿದರು. ಮುಖ್ಯಮಂತ್ರಿಗಳ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಕರ್ನಾಟಕ ಸಿವಿಲ್ ಸೇವೆಗಳ 2011ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ ವಿಧೇಯಕ 2022ಅನ್ನು ಮಂಡಿಸಿದರು. ಮಹಿಳೆಯೊಬ್ಬರು […]