ಪಕ್ಷಾಂತರ ಮಾಡದಂತೆ ಜೆಡಿಎಸ್ ಅಭ್ಯರ್ಥಿಗಳಿಂದ ಆಣೆ ಪ್ರಮಾಣ

ಮುಳಬಾಗಿಲು, ನ.1- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳಾಗಿ ಸ್ರ್ಪಸುವವರಿಗೆ ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರಮಾಣ ಮಾಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭೆ ಚುನಾವಣೆಗೆ ಮೊದಲ ಹಂತದ ಸುಮಾರು 100 ಅಭ್ಯರ್ಥಿಗಳ ಪಟ್ಟಿ ಸಿದ್ದವಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಸಲಹೆ ಪಡೆದು ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ಚುನಾವಣೆಯಲ್ಲಿ ಗೆದ್ದ ನಂತರ ಯಾವುದೇ ಆಸೆ ಆಮೀಷಕ್ಕೆ ಒಳಗಾಗಿ ಪಕ್ಷಾಂತರ ಮಾಡುವುದಿಲ್ಲ ಎಂದು ಪ್ರಮಾಣ ವಚನ ಮಾಡಿಸಲು ಉದ್ದೇಶಿಸಲಾಗಿದೆ. ಇಂದು […]