3 ಹಂತಗಳಲ್ಲಿ ಜೆಡಿಎಸ್ ಪಟ್ಟಿ ಬಿಡುಗಡೆ

ಬೆಂಗಳೂರು, ನ.12- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಸ್ವಂತ ಶಕ್ತಿಯ ಮೇಲೆ ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿಯಬೇಕು ಎಂಬ ಗುರಿ ಹೊಂದಿರುವ ಜೆಡಿಎಸ್ ಮೂರು ಹಂತಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಉದ್ದೇಶಿಸಿದೆ. ಮಳೆಯಿಂದಾಗಿ ಮುಂದೂಡಿದ್ದ ಬಹು ನಿರೀಕ್ಷಿತ ಪಂಚರತ್ನ ರಥಯಾತ್ರೆ ಪ್ರಾರಂಭದ ದಿನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ. ಸಂಭವನೀಯ ಅಭ್ಯರ್ಥಿಗಳಿಗೆ ಎರಡು-ಮೂರು ಹಂತದ ಕಾರ್ಯಗಾರ ನಡೆಸಿದ ಬಳಿಕ ಚುನಾವಣಾ ತಂತ್ರಗಾರಿಕೆ ಬಗ್ಗೆ ಪರಿಣಿತರಿಂದ ರಹಸ್ಯ ತರಬೇತಿಯನ್ನು ಈಗಾಗಲೇ ನೀಡಿದೆ. […]