2023ರ ವಿಧಾನಸಭೆ ಚುನಾವಣೆ : ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮುಂದೂಡಿಕೆ

ಬೆಂಗಳೂರು, ಜ.15- ರಾಜ್ಯದಲ್ಲಿ ತೀವ್ರವಾಗಿ ಹೆಚ್ಚಾಗುತ್ತಿರುವ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಮುಂದಿನ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯನ್ನು ಮುಂದೂಡಲಾಗಿದೆ. 2023ರ ವಿಧಾನಸಭೆ ಚುನಾವಣೆಗೆ ಸ್ರ್ಪಧಿಸಲಿರುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲು ಸಿದ್ಧತೆ ಮಾಡಲಾಗಿತ್ತು. ಪ್ರಾಥಮಿಕ ಹಂತದ ಪಟ್ಟಿಯನ್ನು ಸಿದ್ಧಗೊಳಿಸಿ ಬಿಡುಗಡೆ ಮಾಡುವ ಮುನ್ನ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಬೇಕಿತ್ತು. ಆದರೆ, ಕಳೆದ ಎರಡು ವಾರಗಳಿಂದ ನಿರಂತರವಾಗಿ ಕೋವಿಡ್ ಸೋಂಕು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವುದರಿಂದ ಜೆಡಿಎಸ್ […]