ಮುಂದಿನ ವಾರ ಜೆಡಿಎಸ್ ಕೋರ್‍ಕಮಿಟಿ ಸದಸ್ಯರ ಪಟ್ಟಿ ಪ್ರಕಟ

ಬೆಂಗಳೂರು,ಜ.20- ಜೆಡಿಎಸ್‍ನ ಕೋರ್‍ಕಮಿಟಿ ಪಟ್ಟಿ ಹಾಗೂ ರಾಜ್ಯ ಮಟ್ಟದ ಪದಾಕಾರಿಗಳ ಪಟ್ಟಿ ಮುಂದಿನ ವಾರ ಪ್ರಕಟವಾಗುವ ಸಾಧ್ಯತೆ ಇದೆ.ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಕೋರ್‍ಕಮಿಟಿ ಸದಸ್ಯರ ಆಯ್ಕೆ ಹಾಗೂ ಪದಾಕಾರಿಗಳ ಪುನರ್ ನೇಮಕದ ಬಗ್ಗೆ ಗಂಭೀರ ಚರ್ಚೆಯಾಗಿದೆ. ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಎಚ್.ಕೆ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಆಯ್ದ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.ವಿಭಾಗ ಮಟ್ಟದ ಪದಾಕಾರಿಗಳೂ ಸೇರಿದಂತೆ ಪಕ್ಷವನ್ನು ಪುನರ್ ಸಂಘಟನೆ ಮಾಡಲು ನಿರ್ಧರಿಸಲಾಗಿದೆ. […]