ಅಧಿವೇಶನದ ಸಮಯ ಹಾಳು ಮಾಡುತ್ತಿರುವ ಕಾಂಗ್ರೆಸ್-ಬಿಜೆಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ
ಬೆಂಗಳೂರು,ಫೆ.21- ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಸಮಯವನ್ನು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಳು ಮಾಡುತ್ತಿವೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಇಂದು ಪ್ರತಿಭಟನೆ ನಡೆಸಿದರು. ವಿಧಾನಸೌಧ ಮತ್ತು ವಿಕಾಸಸೌಧದ ಬಳಿ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆ ಬಳಿ ಫಲಕಗಳನ್ನು ಹಿಡಿದು, ಘೋಷಣೆ ಕೂಗಿ ಪ್ರತಿಭಟನೆ ಮಾಡಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶಂಪುರ್, ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಉಭಯ ಸದನಗಳ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡು ಎರಡು […]