‘ಜನತಾ ಜಲಧಾರೆ’ ಕಾರ್ಯಕ್ರಮ ಮುಂದೂಡಿದ ಜೆಡಿಎಸ್

ಬೆಂಗಳೂರು, ಜ.18-ರಾಜ್ಯಾದ್ಯಂತ ಪವಿತ್ರ ಜಲ ಸಂಗ್ರಹಿಸುವ ವಿಶೇಷ ಕಾರ್ಯಕ್ರಮ ಜನತಾ ಜಲಧಾರೆ ಮುಂದೂಡಿಕೆಯಾಗಲಿದೆ. ಗಣರಾಜ್ಯೋತ್ಸವ ದಿನವಾದ ಜ.26ರಂದು ಜನತಾ ಜಲಧಾರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಜೆಡಿಎಸ್ ಉದ್ದೇಶಿಸಿತ್ತು. ಆದರೆ, ರಾಜ್ಯದಲ್ಲಿ ನಿರಂತರವಾಗಿ ಏರುತ್ತಿರುವ ಕೋವಿಡ್‍ನಿಂದಾಗಿ ಉದ್ದೇಶಿತ ಜನತಾ ಜಲಧಾರೆ ಕಾರ್ಯಕ್ರಮವನ್ನು ಮುಂದೂಡಲು ಜೆಡಿಎಸ್ ವರಿಷ್ಠರು ತೀರ್ಮಾನಿಸಿದ್ದಾರೆ. ಫೆಬ್ರವರಿ ಅಂತ್ಯದವರೆಗೂ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ವಿರಳ ಎಂಬ ಅಭಿಪ್ರಾಯ ತಜ್ಞರಿಂದ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮುಂದೂಡಲು ನಿರ್ಣಯಿಸಿದ್ದಾರೆ. ಜನತಾ ಜಲಧಾರೆಗಾಗಿ ಗಂಗಾರಥವನ್ನು ಸಿದ್ಧಗೊಳಿಸಲಾಗಿತ್ತು. ನಾಡಿನ ಜೀವನದಿಗಳಿಂದ […]

ನಾಳೆ ಜೆಡಿಎಸ್ ಶಾಸಕರ ಮಹತ್ವದ ಸಭೆ

ಬೆಂಗಳೂರು,ಜ.17- ಜನತಾ ಜಲಧಾರೆ ಯೋಜನೆಯ ಸಿದ್ದತೆ, ಪಕ್ಷ ಸಂಘಟನೆ ಬಗ್ಗೆ ಜೆಡಿಎಸ್ ಮಹತ್ವದ ಸಭೆ ನಾಳೆ ನಡೆಯಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ.ದೇವೇಗೌಡರ ಅಧ್ಯಕ್ಷತೆಯಲ್ಲಿ ನಾಳೆ ಮಧ್ಯಾಹ್ನ ಜೆ.ಪಿ.ಭವನದಲ್ಲಿ ಸಭೆ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಸೇರಿದಂತೆ ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು ಹಾಗೂ ಪ್ರಮುಖ ಮುಖಂಡರನ್ನು ಸಭೆಯಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಲಾಗಿದೆ. ರಾಜ್ಯದ ಪ್ರಮುಖ ಜೀವನದಿಗಳಿಂದ ಜಲವನ್ನು ತಂದು ನಗರದಲ್ಲಿ ಪೂಜಿಸುವ ಉದ್ದೇಶ ಹೊಂದಿರುವ ಜನತಾ ಜಲಧಾರೆ ರೂಪುರೇಷೆ ಬಗ್ಗೆ ಸಭೆಯಲ್ಲಿ […]

23ರಿಂದ ಜೆಡಿಎಸ್‍ನಿಂದ ಜಲಧಾರೆಗೆ ಚಾಲನೆ

ಬೆಂಗಳೂರು, ಜ.7- ರಾಜ್ಯದಲ್ಲಿ ವ್ಯರ್ಥವಾಗುವ ಮಳೆ ನೀರನ್ನು ಸದ್ಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಜಲಧಾರೆ ಯೋಜನೆಯನ್ನು ಜೆಡಿಎಸ್ ರೂಪಿಸಲು ಮುಂದಾಗಿದೆ. ಗಂಗೆಯನ್ನು ಪರಮ ಪವಿತ್ರವೆಂದು ಭಾವಿಸುವ ನಮ್ಮ ಪರಂಪರೆ, ನಂಬಿಕೆಗೆ ಚ್ಯುತಿ ಬಾರದಂತೆ ಶ್ರದ್ಧಾಭಕ್ತಿಯಿಂದ ರಾಜ್ಯದ 15 ನದಿಗಳ ಪವಿತ್ರ ಜಲವನ್ನು ಕಲಶಗಳಲ್ಲಿ ಸಂಗ್ರಹ ಮಾಡಿ, ಆ ನೀರನ್ನು ಬೆಂಗಳೂರಿನ ಪಕ್ಷದ ಕೇಂದ್ರ ಕಚೇರಿ ಜೆಪಿ ಭವನಕ್ಕೆ ಬರಮಾಡಿಕೊಂಡು ಗಂಗಾಪೂಜೆ ನೆರವೇರಿಸುವ ಮೂಲಕ ಜಲಧಾರೆ ಯೋಜನೆಗೆ ಚಾಲನೆ ನೀಡಲಿದೆ. ಜ.23ರಂದು ರಾಮನಗರದ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇಗುಲದಿಂದ ರಾಜ್ಯದ […]

ಜನತಾ ಜಲಧಾರೆ ಕಾರ್ಯಕ್ರಮದ ಬಗ್ಗೆ ನಾಳೆ ಜೆಡಿಎಸ್ ಸಭೆ

ಬೆಂಗಳೂರು, ಜ.6- ರಾಜ್ಯದಲ್ಲಿರುವ ಜೀವನದಿಗಳಿಂದ ಜಲ ಸಂಗ್ರಹಿಸಲು ಹಮ್ಮಿಕೊಳ್ಳುವ ಜನತಾ ಜಲಧಾರೆ ಕಾರ್ಯಕ್ರಮ ಮತ್ತು ಪಕ್ಷದ ಸಾಂಸ್ಥಿಕ ಚುನಾವಣೆ ಬಗ್ಗೆ ಸಮಾಲೋಚನೆ ನಡೆಸಲು ನಾಳೆ ಜೆಡಿಎಸ್ ಸಭೆ ನಡೆಯಲಿದೆ. ನಾಳೆ ಮಧ್ಯಾಹ್ನ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಂಕ್ರಾಂತಿ ನಂತರ ರಾಜ್ಯದ ಪ್ರಮುಖ ಜೀವನದಿಗಳಿಂದ ಜಲ ಸಂಗ್ರಹಿಸುವ ಜನತಾ ಜಲಧಾರೆ ಕಾರ್ಯಕ್ರಮ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಅಲ್ಲದೆ, ಪಕ್ಷದ ಸಾಂಸ್ಥಿಕ ಚುನಾವಣೆ ನಡೆಸುವ ಬಗ್ಗೆಯೂ ಗಂಭೀರ […]