ಶಿವರಾತ್ರಿ ನಂತರ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ..?

ಬೆಂಗಳೂರು, ಜ.25-ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಮಹಾಶಿವರಾತ್ರಿ ಹಬ್ಬದದೊಳಗೆ ಪ್ರಕಟಗೊಳ್ಳುವ ನಿರೀಕ್ಷೆ ಇದೆ. ಮೊದಲ ಹಂತದಲ್ಲಿ 93 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಜೆಡಿಎಸ್ ಈಗ ಎರಡನೇ ಹಂತದಲ್ಲಿ ಸುಮಾರು 60 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ಇನ್ನೆರಡು ವಾರದಲ್ಲಿ ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ತೀವ್ರ ಕುತೂಹಲ ಕೆರಳಿಸಿರುವ ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ. ಹಾಸನ, ಅರಕಲಗೂಡು ಹಾಗೂ ಅರಸೀಕೆರೆ ವಿಧಾನಸಭಾ […]

ಹಾಸನ ಜೆಡಿಎಸ್ ಟಿಕೆಟ್‌ಗೆ ಜಿದ್ಧಾಜಿದ್ದಿ

ಹಾಸನ, ಜ.25- ಹಾಸನ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಜಿ.ಪಂ.ಮಾಜಿ ಸದಸ್ಯೆ ಭವಾನಿ ರೇವಣ್ಣ ಸಮಾರಂಭ ಒಂದರಲ್ಲಿ ಹೇಳಿಕೊಂಡಿದ್ದಾರೆ. ತಾಲ್ಲೂಕಿನ ಕಕ್ಕೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಅಣ್ಣಪ್ಪ ಸ್ವಾಮಿ ದೇವಾಲಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಅವರು ಜೆಡಿಎಸ್‍ನಿಂದ ನನ್ನನ್ನು ಅಭ್ಯರ್ಥಿ ಮಾಡಬೇಕು ಎಂದು ಎಲ್ಲರೂ ಮಾತನಾಡಿಕೊಂಡು ನಿರ್ಣಯ ತೆಗೆದುಕೊಂಡಿದ್ದಾರೆ. ಸ್ವಲ್ಪ ದಿನಗಳಲ್ಲೇ ನನ್ನ ಹೆಸರು ಘೋಷಣೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ. ಜನರ ಪರಿಚಯ ಇದ್ದರೆ, ಊರಿನ ಪರಿಚಯ ಆಗುತ್ತದೆ. ಮುಂದಿನ ದಿನಗಳಲ್ಲಿ ಕೆಲಸ ಮಾಡಲು […]

ಮಹಿಳೆಯರ ಮತ ಗೆಲ್ಲಲು ರಾಜಕೀಯ ಪಕ್ಷಗಳಿಂದ ಭರ್ಜರಿ ಘೋಷಣೆ

ಬೆಂಗಳೂರು,ಜ.24-ಯಾವುದೇ ಚುನಾವಣೆಯಲ್ಲಿ ಪಕ್ಷ ಮತ್ತು ಅಭ್ಯರ್ಥಿಗಳ ಸೋಲು ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿರುವ ಮಹಿಳಾ ಮತದಾರರ ಮನಗೆಲ್ಲಲು ಪ್ರಮುಖ ರಾಜಕೀಯ ಪಕ್ಷಗಳು ಮುಂದಾಗಿವೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ನಾರಿಯರ ಮನಗೆಲ್ಲಲು ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತರುವುದಾಗಿ ಭರಪೂರ ಭರವಸೆಗಳನ್ನು ಘೋಷಣೆ ಮಾಡುತ್ತಿದ್ದಾರೆ.ರಾಜ್ಯದಲ್ಲಿ ಈ ಬಾರಿ ಒಟ್ಟು 5, 05,48,553ಮತದಾರರು ಇದ್ದು, ಇದರಲ್ಲಿ 2,51,76,605 ಪುರುಷರು ಮತ್ತು 2,47,53,779 ಮಹಿಳಾ ಮತದಾರರು ಇದ್ದಾರೆ. ಪುರುಷರಿಗೆ ಹೋಲಿಸಿದರೆ ಮಹಿಳಾ ಮತದಾರರ ಸಂಖ್ಯೆ ಕೇವಲ 3,55,399 […]

ಸಿದ್ದು ವಿರುದ್ಧ ಎಚ್‍ಡಿಕೆ ಕಿಡಿ

ಮುದೇಬಿಹಾಳ, ಜ. 22- ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಲು ಧರ್ಮಸ್ಥಳದ ಸಿದ್ದವನದಲ್ಲಿ ನಡೆಸಿದ ಷಡ್ಯಂತ್ರವನ್ನು ಬಿಚ್ಚಿಡಬೇಕಾಗುತ್ತದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ವಿರುದ್ಧ ಕೆಂಡಾಮಂಡಲರಾದ ಮಾಜಿ ಮುಖ್ಯಮಂತ್ರಿಗಳು, ಜನರು ಕಷ್ಟ ಹೇಳಿಕೊಂಡು ನಮ್ಮ ಬಳಿ ನಿರಂತರವಾಗಿ ಬರುತ್ತಾರೆ. ಅನಗತ್ಯವಾಗಿ ಜೆಡಿಎಸ್ ಪಕ್ಷದ ಬಗ್ಗೆ ಮಾತನಾಡಬೇಡಿ ಎಂದು ತರಾಟೆಗೆ ತೆಗೆದುಕೊಂಡರು. ಮುಖ್ಯಮಂತ್ರಿ ಆಸೆಗಾಗಿ ಪಕ್ಷ ಬಿಟ್ಟು ಹೋಗಿದ್ದು ನೆನಪು ಇದೇಯಾ ನಿಮಗೆ? […]

ಜೆಡಿಎಸ್ ಸ್ವಂತಬಲದ ಮೇಲೆ ಅಧಿಕಾರ ಹಿಡಿಯಲು ಬೆಂಬಲ ನೀಡಿ: ನಿಖಿಲ್

ಚನ್ನಪಟ್ಟಣ,ಜ.21- ಯಾವುದೇ ರಾಷ್ಟ್ರೀಯ ಪಕ್ಷಗಳ ಜೊತೆ ಹೊಂದಾಣಿಕೆಗೆ ಅವಕಾಶ ಮಾಡಿಕೊಡದೆ ಸ್ವಂತ ಬಲದ ಮೇಲೆ ರಾಜ್ಯದ ಅಧಿಕಾರ ಹಿಡಿಯಲು ಪ್ರಾದೇಶಿಕ ಪಕ್ಷ ಜೆಡಿಎಸ್‍ಗೆ ಈ ಭಾರಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಲಿದೆ ಎಂದು ರಾಜ್ಯ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‍ಕುಮಾರಸ್ವಾಮಿ ಆತ್ಮವಿಶ್ವಾಸ ವ್ಯಕ್ತಪಡಿಸಿದರು. ತಾಲ್ಲೂಕಿನ ಕೋಡಂಬಳ್ಳಿ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ವಿರುಪಾಕ್ಷಿಪುರ ಗ್ರಾಮ ಪಂಚಾಯ್ತಿಯ ವಿರುಪಾಕ್ಷಿಪುರ ಗ್ರಾಮದಲ್ಲಿ ಆಯೋಜನೆ ಮಾಡಲಾಗಿದ್ದ, ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಪೂರ್ವ ಭಾವಿಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಅಲ್ಪತಿಂಗಳು ಮುಖ್ಯಮಂತ್ರಿಯಾಗಿ ಅಕಾರ […]

ಜೆಡಿಎಸ್ ಸೇರಿದ ಬಿಜೆಪಿ-ಕಾಂಗ್ರೆಸ್ ಮುಖಂಡರು

ಬೀದರ್, ಜ.22- ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಚಾಂಗಲೇರಾ ಮತ್ತು ಕರಕನಳ್ಳಿ ಗ್ರಾಮಗಳ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮುಖಂಡರು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಖಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಜೆಡಿಎಸ್ ಪಕ್ಷದ ಧ್ವಜ ನೀಡುವ ಮೂಲಕ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಡೆಪ್ಪ ಖಾಶೆಂಪುರ್ ರವರು ಜೆಡಿಎಸ್ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್, ನಾವೆಲ್ಲರೂ ಸೇರಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕಾಗಿದೆ. ಪಕ್ಷ ಸಂಘಟನೆ, […]

ಹೃದಯಾಘಾತದಿಂದ ಸಿಂದಗಿ ಜೆಡಿಎಸ್ ಅಭ್ಯರ್ಥಿ ನಿಧನ

ಬೆಂಗಳೂರು, ಜ.21- ಸಿಂದಗಿ ವಿಧಾನಸಭಾ ಕ್ಷೇತ್ರದ ಘೋಷಿತ ಜೆಡಿಎಸ್ ಅಭ್ಯರ್ಥಿ ಹಾಗೂ ನಿವೃತ್ತ ಯೋಧ ಶಿವಾನಂದ ಪಾಟೀಲ್ ಸೋಮಜ್ಯಾಳ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ಪತ್ನಿ, ಪುತ್ರ ಮತ್ತು ಪುತ್ರಿ ಅವರನ್ನು ಅಗಲಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಗೆ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಅವರನ್ನು ಘೋಷಣೆ ಮಾಡಲಾಗಿತ್ತು. ನಿನ್ನೆ ಮಧ್ಯಾಹ್ನ ನಾಗಠಾಣ ಕ್ಷೇತ್ರದ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದರು. ಪಕ್ಷದ ಕಾರ್ಯಕ್ರಮ ಮುಗಿಸಿ ನಿನ್ನೆ ರಾತ್ರಿ ಸಿಂದಗಿ ಪಟ್ಟಣಕ್ಕೆ ತೆರಳಿದ್ದರು. ತಡ ರಾತ್ರಿತೀವ್ರವಾಗಿ ಅಸ್ವಸ್ಥಗೊಂಡಿದ್ದ […]

ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆ ಜಾರಿ

ಬೆಂಗಳೂರು, ಜ.20- ಪಂಚರತ್ನ ರಥಯಾತ್ರೆ ಮೂಲಕ ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರ ಆರಂಭಿಸಿರುವ ಜೆಡಿಎಸ್ ರಾಜ್ಯ ಸರ್ಕಾರಿ ನೌಕರರಿಗೆ ಹಳೇ ಪಿಂಚಣಿ ಯೋಜನೆ ಜಾರಿಗೆ ತರುವ ಭರವಸೆಯನ್ನು ನೀಡುತ್ತಿದೆ. ರಾಜ್ಯ ಸಮಗ್ರ ಅಭಿವೃದ್ಧಿಗೆ ಪಂಚ ಯೋಜನೆಗಳನ್ನು ಜಾರಿಗೆ ತರುವ ಭರವಸೆಯೊಂದಿಗೆ ಚುನಾವಣಾ ಪ್ರಚಾರ ಕೈಗೊಳ್ಳುತ್ತಿದೆ. ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ ವಿರೋಧಿ ಪ್ರತಿಭಟನೆ ನಡೆಸಿದ್ದಾರೆ. ಹಳೇ ಪಿಂಚಣಿ ಯೋಜನೆ ಜಾರಿಗಾಗಿ ಆಗ್ರಹಿಸುತ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಹಳೇ ಪಿಂಚಣಿ ಯೋಜನೆ ಮರು […]

ಕಾಂಗ್ರೆಸ್-ಜೆಡಿಎಸ್‍ಗೆ ಸೆಡ್ಡು ಹೊಡೆಯಲು ಬಿಜೆಪಿ ರಣತಂತ್ರ

ಬೆಂಗಳೂರು, ಜ.11- ರಾಜ್ಯದಲ್ಲಿ ಶತಾಯಗತಾಯ ಅಧಿಕಾರ ಹಿಡಿಯಲೇಬೇಕೆಂದು ಮುಂದಾಗಿರುವ ಬಿಜೆಪಿ ಕಾಂಗ್ರೆಸ್ ಮತ್ತು ಜೆಡಿಎಸ್‍ಗೆ ಠಕ್ಕರ್ ಕೊಡುವ ರೀತಿಯಲ್ಲಿ ಸದ್ದಿಲ್ಲದೆ ಒಳಗೊಳಗೆ ಕಾರ್ಯತಂತ್ರ ಹೆಣೆಯಲು ಮುಂದಾಗಿದೆ. ಒಂದು ಕಡೆ ಪ್ರಧಾನಿ ನರೇಂದ್ರಮೋದಿ ಅವರು ನಾಳೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದರೆ 19ರಂದು ಮತ್ತೆ ಕಲ್ಬುರ್ಗಿಗೆ ಆಗಮಿಸಲಿದ್ದಾರೆ. ಈ ತಿಂಗಳ ಅಂತ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಷಾ, ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ದಾಂಗುಡಿ ಇಡಲಿದ್ದಾರೆ. ಫೆ.17ಕ್ಕೆ ಹಣಕಾಸು ಖಾತೆಯನ್ನ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು […]

‘ವಿಶ್ವ ಹಿಂದಿ ದಿವಸ್’ ಆಚರಣೆ ನಿಲ್ಲಿಸುವಂತೆ ಜೆಡಿಎಸ್ ಆಗ್ರಹ

ಬೆಂಗಳೂರು, ಜ.10- ವಿಶ್ವ ಹಿಂದಿ ದಿವಸವನ್ನು ನಿಲ್ಲಿಸಿ ಎಂದು ಆಗ್ರಹಿಸಿರುವ ಜೆಡಿಎಸ್, ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವುದನ್ನು ಖಂಡಿಸುವುದಾಗಿ ಹೇಳಿದೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಒಕ್ಕೂಟ ಸರ್ಕಾರದ ಅಣತಿಯಂತೆ ವಿಶ್ವ ಹಿಂದಿ ದಿವಸದ ಬಗ್ಗೆ ಉತ್ಸುಕರಾಗಿರುವ ರಾಜ್ಯ ಬಿಜೆಪಿಯವರೆ, ನಿಮ್ಮ ಗುಲಾಮಗಿರಿಗೆ ಕನ್ನಡಿಗರ ಒಕ್ಕೊರಲ ಧಿಕ್ಕಾರ ಎಂದಿದೆ. ಹಿಂದಿ ಹೇರಿಕೆಯ ಹುನ್ನಾರಕ್ಕೆ ನಮ್ಮ ಭಾಷೆಯನ್ನು ಬಲಿ ಕೊಡುವ ನಿಮ್ಮ ಬೆನ್ನು ಮೂಳೆ ಇಲ್ಲದ ರಾಜಕೀಯವನ್ನು ಬಲವಾಗಿ ಖಂಡಿಸುತ್ತೇವೆ ಎಂದು […]