ವಲಸಿಗರಿಗೆ ಜೆಡಿಎಸ್ ಮಣೆ

ಬೆಂಗಳೂರು, ಮಾ.7- ರಾಷ್ಟ್ರೀಯ ಪಕ್ಷಗಳಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿ ಚುನಾವಣಾ ಅಖಾಡಕ್ಕಿಳಿದಿರುವ ಜೆಡಿಎಸ್, ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ವಲಸೆ ಬಂದವರಿಗೆ ಮಣೆ ಹಾಕುತ್ತಿದೆ. ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಬೇಕು ಎಂಬ ಉದ್ದೇಶದಿಂದ 123 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು ಎಂಬ ಗುರಿ ಹೊಂದಿದೆ. ಇದಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆಯ ಮೂಲಕ ಚುನಾವಣಾ ಪ್ರಚಾರವನ್ನು ಆರಂಭಿಸಲಾಗಿದೆ. ಈ ನಡುವೆ ರಾಷ್ಟ್ರೀಯ ಪಕ್ಷಗಳನ್ನು ತೊರೆದು ಪಕ್ಷಕ್ಕೆ […]

ಮಾ.8 ರಿಂದ ಮತ್ತೆ ಪಂಚರತ್ನ ರಥಯಾತ್ರೆ ಆರಂಭ

ಬೆಂಗಳೂರು, ಮಾ.5-ಜೆಡಿಎಸ್‍ನ ಪಂಚರತ್ನ ರಥಯಾತ್ರೆ ಮತ್ತು ಜನ ಸಂಪರ್ಕ ಕಾರ್ಯಕ್ರಮವು ಮತ್ತೆ ತುಮಕೂರು ಜಿಲ್ಲೆಯ ತಿಪಟೂರಿನಿಂದ ಮಾ. 8ರಂದು ಮರು ಆರಂಭವಾಗಲಿದ್ದು, ಮಾ.26ರಂದು ಸಮಾರೋಪ ಸಮಾರಂಭ ನಡೆಯಲಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಪಂಚರತ್ನ ರಥಯಾತ್ರೆ ಈಗಾಗಲೇ ರಾಜ್ಯ 75 ಕ್ಷೇತ್ರಗಳಲ್ಲಿ ಪೂರ್ಣಗೊಂಡಿದೆ. ಮತ್ತೆ 33 ದಿನಗಳ ಕಾಲ ನಡೆಸಲು ತೀರ್ಮಾನಿಸಲಾಗಿದೆ. ಈ ಯಾತ್ರೆ ಮೂಲಕ ಕುಮಾರಸ್ವಾಮಿ ಅವರ ಬಹು ನಿರೀಕ್ಷಿತ ಮಹತ್ವದ ಪಂಚ ಯೋಜನೆಗಳ ಬಗ್ಗೆ ಆಯಾ ಕ್ಷೇತ್ರದ ಜನರಿಗೆ ಮನವರಿಕೆ ಮಾಡಿಕೊಡುವ ಮೂಲಕ […]

ಮೈಸೂರಿನಲ್ಲಿ ಮಾ.2 6ಕ್ಕೆ ಜೆಡಿಎಸ್ ಪಂಚರತ್ನ ಸಮಾರೋಪ

ಬೆಂಗಳೂರು, ಮಾ.4- ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದಿಂದ ಪ್ರಾರಂಭಿಸಿರುವ ಜೆಡಿಎಸ್ ಪಂಚರತ್ನ ರಥಯಾತ್ರೆಯ ಸಮಾರೋಪ ಸಮಾರಂಭವು ಮಾರ್ಚ್ 26ರಂದು ಮೈಸೂರಿನಲ್ಲಿ ಜರುಗಲಿದೆ.ಬೆಂಗಳೂರಿನಿಂದ ಮೈಸೂರಿನವರೆಗೆ ಬೃಹತ್ ರೋಡ್ ಶೋ ನಡೆಸಲು ಉದ್ದೇಶಿಸಿದೆ. ಕುಂಬಳಗೋಡಿನಿಂದ ಪ್ರಾರಂಭವಾಗಿ ಮೈಸೂರಿನವರೆಗೆ ಸುಮಾರು 100 ಕೀ.ಮೀ ದೂರ ರೋಡ್ ಶೋ ಮಾಡಲಿದ್ದು, ಆ ರೋಡ್ ಶೋದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ತೆರೆದ ವಾಹನದಲ್ಲಿ ಕರೆದುಕೊಂಡು ಹೋಗಲು ಯೋಜಿಸಲಾಗಿದೆ. ಅಲ್ಲದೆ, ಸಮಾರೋಪ ಸಮಾವೇಶದಲ್ಲಿ ಹತ್ತು ಲಕ್ಷ ಜನ ಸೇರುವ ನಿರೀಕ್ಷೆ ಇದೆ ಎಂದು ಮಾಜಿ […]

ಜೆಡಿಎಸ್ ಅಭ್ಯರ್ಥಿಗಳಿಗೆ ಸಂಪನ್ಮೂಲದ್ದೇ ಚಿಂತೆ

ಬೆಂಗಳೂರು, ಫೆ.27- ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಗಳಿಸಿ ಸ್ವಂತ ಶಕ್ತಿಯ ಮೇಲೆ ಅಧಿಕಾರಕ್ಕೆ ಬರಬೇಕೆಂಬ ಗುರಿಯೊಂದಿಗೆ ಜೆಡಿಎಸ್ ಪಂಚರತ್ನ ರಥಯಾತ್ರೆ ಹೆಸರಿನಲ್ಲಿ ಪ್ರಚಾರ ಕೈಗೊಂಡಿದೆ. ಆದರೆ, ಅಭ್ಯರ್ಥಿಗಳಿಗೆ ಚುನಾವಣೆ ವೆಚ್ಚದ್ದೇ ದೊಡ್ಡ ಚಿಂತೆಯಾಗಿ ಕಾಡ ತೊಡಗಿದೆ. ರಾಷ್ಟ್ರೀಯ ಪಕ್ಷಗಳು ಪೈಪೋಟಿ ಗಿಳಿದು ಚುನಾವಣೆ ಸಂದರ್ಭದಲ್ಲಿ ವೆಚ್ಚ ಮಾಡುತ್ತವೆ. ಆ ಪಕ್ಷಗಳ ಅಭ್ಯರ್ಥಿಗಳಿಗೆ ಸರಿಸಮನಾಗಿ ವೆಚ್ಚ ಮಾಡುವ ಶಕ್ತಿ ಬಹಳಷ್ಟು ಅಭ್ಯರ್ಥಿಗಳಿಗೆ ಇಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಚುನಾವಣೆ ಘೋಷಣೆಯಾಗುವ ಮುನ್ನವೇ ಆಗುತ್ತಿರುವ ವೆಚ್ಚ ದೊಡ್ಡ […]

ಭದ್ರಾವತಿಯಿಂದ ಪಂಚರತ್ನ ರಥಯಾತ್ರೆ ಪುನಾರಂಭ

ಬೆಂಗಳೂರು,ಫೆ.21-ಮಹಾ ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ನಾಲ್ಕು ದಿನಗಳ ಕಾಲ ಪಂಚರತ್ನ ರಥಯಾತ್ರೆಗೆ ಬಿಡುವು ನೀಡಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಇಂದಿನಿಂದ ರಥಯಾತ್ರೆಯನ್ನು ಮರು ಆರಂಭ ಮಾಡಿದ್ದಾರೆ. ಶಿವಮೊಗ್ಗ ಜಿಲ್ಲಾಯ ಭದ್ರಾವತಿ ಕ್ಷೇತ್ರದಿಂದ ರಥಯಾತ್ರೆ ಶುರುವಾಗಿದ್ದು, ಒಟ್ಟು 9 ಕ್ಷೇತ್ರಗಳಲ್ಲಿ ಈ ಯಾತ್ರೆ ನಡೆಸಲಾಗುತ್ತದೆ. ನಾಳೆ ಶಿವಮೊಗ್ಗ ಗ್ರಾಮಾಂತರ, 23ರಂದು ಸೊರಬ, 24ರಂದು ಯಲ್ಲಾಪುರ ಮತ್ತು ತೀರ್ಥಹಳ್ಳಿ, 25ರಂದು ತೀರ್ಥಹಳ್ಳಿ ಹಾಗೂ ಕೊಪ್ಪ, ಫೆ.26ರಂದು ಶೃಂಗೇರಿ, ಕೊಪ್ಪ, 28ಕ್ಕೆ ಚಿಕ್ಕಮಗಳೂರು ಹಾಗೂ ಮಾರ್ಚ್ 1ರಂದು ಮೂಡಿಗೆರೆ ಕ್ಷೇತ್ರಗಳಲ್ಲಿ […]

ಕಾಂಗ್ರೆಸ್‍ನಲ್ಲಿ ಪಕ್ಷ ನಿಷ್ಠರ ಅಸಮಾಧಾನ

ಬೆಂಗಳೂರು,ಫೆ.20- ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ನಾಯಕರ ವಲಸೆಯ ಪ್ರಮಾಣ ಹೆಚ್ಚಾಗಲಾರಂಭಿಸಿದೆ. ಜೆಡಿಎಸ್‍ನ ನಾಲ್ಕು ಶಾಸಕರು, ಉತ್ತರಕರ್ನಾಟಕ ಭಾಗದ ಬಿಜೆಪಿಯ ಮೂವರು ಶಾಸಕರು, ಸುಮಾರು 20ಕ್ಕೂ ಹೆಚ್ಚು ಮಂದಿ ಮಾಜಿ ಶಾಸಕರು ಪಕ್ಷಕ್ಕೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದಾರೆ. ಅದರಲ್ಲೂ ಬಿಜೆಪಿ ಆಡಳಿತದಲ್ಲಿದ್ದಾಗ ಅವಡಗಚ್ಚಿಕೊಂಡಿದ್ದ ನಾಯಕರು ಅಧಿಕಾರ ಅವಧಿ ಕೊನೆಗೊಳ್ಳುತ್ತಿದ್ದಂತೆ ಪಕ್ಷ ತೊರೆಯಲು ಮುಂದಾಗಿದ್ದಾರೆ. ಇದು ಕಾಂಗ್ರೆಸ್‍ಗೆ ಸಿಹಿ-ಕಹಿ ಮಿಶ್ರ ಅನುಭೂತಿಯನ್ನು ಸೃಷ್ಟಿಸಿದೆ. ಒಂದೆಡೆ ಕಾಂಗ್ರೆಸ್‍ಗೆ ಅನ್ಯ ಪಕ್ಷಗಳಿಂದ ವಲಸೆ ಹೆಚ್ಚುತ್ತಿರುವುದು ಸಕಾರಾತ್ಮಕವಾದ ಬೆಳವಣಿಗೆಯಾಗಿದ್ದರೆ, ಮತ್ತೊಂದೆಡೆ ವಲಸಿಗರಿಂದಾಗಿ ಮೂಲ ಕಾಂಗ್ರೆಸ್ಸಿಗರು […]

ಶಿವಲಿಂಗೇಗೌಡ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ಹಾಸನ,ಫೆ.12- ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಜೆಡಿಎಸ್ ಪಕ್ಷದ ಚಿಹ್ನೆ ಎಂದರೆ ಅಲರ್ಜಿ. ಜೆಡಿಎಸ್ ಚಿಹ್ನೆ ಇರುವ ಕಾರ್ಯಕ್ರಮಕ್ಕೆ ಅವರು ಬರಲು ಸಾಧ್ಯವಾಗುತ್ತದೆಯೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಹೊಳೆನರಸೀಪುರ ತಾಲ್ಲೂಕಿನ ನಗರ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ವರ್ಷದಿಂದ ಶಿವಲಿಂಗೇಗೌಡರಿಗೆ ಜೆಡಿಎಸ್ ಚಿಹ್ನೆ ಅಲರ್ಜಿಯಾಗಿದ್ದು, ಕಾರ್ಯಕ್ರಮಕ್ಕೆ ಅವರನ್ನು ಕರೆಯುವ ಅವಶ್ಯಕತೆ ಏನಿದೆ? ಅರಸೀಕೆರೆಯಲ್ಲಿ ಹಲವು ಕಾರ್ಯಕ್ರಮ ಮಾಡಿದ್ದರೂ ನಮ್ಮನ್ನು ಕರೆಯಲಿಲ್ಲ. ಅಲ್ಲದೆ ಪಕ್ಷದ ಚಿಹ್ನೆಯಡಿ ಕಾರ್ಯಕ್ರಮ ಮಾಡಿಲಿಲ್ಲ ಎಂದು ಆರೋಪಿಸಿದರು. ಹೆಂಡತಿ ಮೇಲಿನ ಕೋಪಕ್ಕೆ ಮಕ್ಕಳಿಬ್ಬರ ಕತ್ತು […]

ಹಾಸನದಿಂದ ಟಿಕೆಟ್ ಕೊಟ್ಟರೆ ನಾನೇ ಕಣಕ್ಕಿಳಿಯುತ್ತೇನೆ : ರೇವಣ್ಣ

ಹಾಸನ,ಫೆ.10- ಕ್ಷೇತ್ರಕ್ಕೆ ಈಗಾಗಲೇ ನನ್ನನ್ನು ಪಂಥಹ್ವಾನ ಮಾಡಿದ್ದು, ಐವತ್ತು ಸಾವಿರ ಮತಗಳ ಅಂತರದಲ್ಲಿ ಗೆಲ್ಲುವ ಬಗ್ಗೆ ಸವಾಲು ಹಾಕಿದ್ದಾರೆ. ಪಕ್ಷದ ತೀರ್ಮಾನದಂತೆ ಎಲ್ಲಿ ನಿಲ್ಲಿಸಿದರು ನಿಲ್ಲಲು ರೆಡಿಯಾಗಿದ್ದೇನೆ. ಟಿಕೆಟ್ ಕೊಟ್ಟರೆ ನಿಲ್ಲುವೆ ಇಲ್ಲ ಸಾಮಾನ್ಯ ಕಾರ್ಯಕರ್ತನಾಗಿ ಜಿಲ್ಲೆಯಲ್ಲಿ ಪಕ್ಷ ಸಂಘಟಿಸುವ ಕೆಲಸ ಮಾಡುವೆ. ಜಿಲ್ಲೆಯಲ್ಲಿ ಏಳಕ್ಕೆ 7 ಕ್ಷೇತ್ರ ಗೆಲ್ಲುವುದೇ ನಮ್ಮ ಗುರಿ ನಮ್ಮ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಕಲಗೂಡು, ಹಾಸನ ವಿಧಾನಸಭಾ ಕ್ಷೇತ್ರ ಸೇರಿದಂತೆ ಜಿಲ್ಲೆಯ ಏಳು ಕ್ಷೇತ್ರಗಳ […]

ಹಾಸನದಲ್ಲಿ ಸೈಲೆಂಟಾದ ಭವಾನಿ ರೇವಣ್ಣ..!

ಹಾಸನ,ಫೆ.8- ಜೆಡಿಎಸ್ ಟಿಕೆಟ್ ಗೊಂದಲದ ನಡುವೆ ಹಾಸನ ವಿಧಾನಸಭಾ ಕ್ಷೇತ್ರದಾದ್ಯಂತ ಎಚ್.ಪಿ.ಸ್ವರೂಪ ಪ್ರಕಾಶ್ ಬಿರುಸಿನ ಸಂಚಾರ ನಡೆಸುತ್ತಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್ ಪ್ರಮುಖ ಆಕಾಂಕ್ಷಿಯಾಗಿರುವ ಸ್ವರೂಪ ಅವರು ನಗರ ಪ್ರದೇಶದ ಸುತ್ತಮುತ್ತಲಿನ ಗ್ರಾಮಗಳಿಗೆ ಭೇಟಿ ನೀಡುತ್ತಿದ್ದು ಮತದಾರರ ಮನವೊಲಿಕೆಗೆ ಮುಂದಾಗಿದ್ದಾರೆ. ಹಾಸನ ನಗರ ವ್ಯಾಪ್ತಿಯ ಗುಂಡೇಗೌಡನ ಕೊಪ್ಪಲು, ಭಟ್ಲರ್ ಕೊಪ್ಪಲಿನಲ್ಲಿ ಮತದಾರರ ಬೇಟೆಗೆ ಮುಂದಾಗಿರುವ ಸ್ವರೂಪ ಜೆಡಿಎಸ್ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ. ಸ್ವರೂಪ್ ಪ್ರಕಾಶ್ ಅವರು ಹಾಸನ ವಿಧಾನಸಭಾ ಕ್ಷೇತ್ರದ ಗ್ರಾಮಗಳಲ್ಲಿ ನಡೆಯುವ ಪ್ರತಿಯೊಂದು ಶುಭ […]

ಪ್ರವಾಹಕ್ಕೆ ಬಂದಾಗ ಬಾರದ ಪ್ರಧಾನಿ ಪ್ರಚಾರಕ್ಕೆ ಮಾತ್ರ ಹಾಜರ್ : ಜೆಡಿಎಸ್ ಟೀಕೆ

ಬೆಂಗಳೂರು, ಫೆ.7- ನಮ್ಮ ಕರುನಾಡು ಬರಗಾಲ, ಪ್ರವಾಹದಿಂದ ತತ್ತರಿಸಿದಾಗೆಲ್ಲ ಮಾಯವಾಗುವ ಪ್ರಧಾನಿ ನರೇಂದ್ರಯವರು, ಚುನಾವಣೆ ಹತ್ತಿರ ಬಂದ ತಕ್ಷಣ ಪ್ರತ್ಯಕ್ಷರಾಗುತ್ತಾರೆ ಎಂದು ಜೆಡಿಎಸ್ ಟೀಕೆ ಮಾಡಿದೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ಇಡೀ ದೇಶದ ಆರ್ಥಿಕತೆಗೆ ಬೆನ್ನೆಲುಬಾಗಿರುವ ಪ್ರಮುಖ ರಾಜ್ಯಗಳಲ್ಲೊಂದಾದ ಕರ್ನಾಟಕದ ಸಮಸ್ಯೆಗಳಿಗೆ ಕುರುಡಾಗಿ ವರ್ತಿಸುವವರು, ಈಗ ಮತ ಕೇಳಲು ಯಾವ ಮುಖ ಹೊತ್ತು ಬರುತ್ತಾರೆ ಎಂದು ಪ್ರಶ್ನಿಸಿದೆ. ಕರ್ನಾಟಕ ಬಿಜೆಪಿ ಪಾಲಿಗೆ ಇಂದು ಪಾಲಕರನ್ನು ಶಾಲೆಗೆ ಬರಮಾಡಿಕೊಳ್ಳುವ ದಿನದ ಹಾಗೆ. ರಾಜ್ಯಕ್ಕೆ ಆಗಮಿಸುತ್ತಿರುವ […]