ಜ್ಯುವೆಲರಿ ಅಂಗಡಿಯಲ್ಲಿ ದರೋಡೆ ಮಾಡಿದ್ದ ಐದು ಮಂದಿ ಸೆರೆ..

ಬೆಂಗಳೂರು,ಫೆ.23- ಜ್ಯುವೆಲರಿ ಅಂಗಡಿ ಬಾಗಿಲು ಮೀಟಿ ಒಳನುಗ್ಗಿ ಮಲಗಿದ್ದ ಕೆಲಸಗಾರರ ಮೇಲೆ ಲಾಂಗ್‍ನಿಂದ ಹಲ್ಲೆ ನಡೆಸಿ ಚಿನ್ನದ ಸರ ಕಸಿದುಕೊಂಡು ಅಂಗಡಿಯಲ್ಲಿದ್ದ ಬೆಳ್ಳಿ ಸಾಮಾನುಗಳನ್ನು ದೋಚಿಕೊಂಡು ಪರಾರಿಯಾಗಿದ್ದ ಐದು ಮಂದಿ ದರೋಡೆಕೋರರನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 3.77 ಲಕ್ಷ ರೂ. ಬೆಲೆ ಬಾಳುವ 60 ಗ್ರಾಂ ತೂಕದ 2 ಚಿನ್ನದ ಸರಗಳು, ಒಂದು ಕೆಜಿ 80 ಗ್ರಾಂ ತೂಕದ ಬೆಳ್ಳಿ ಸಾಮಾನುಗಳು, 25 ಸಾವಿರ ಹಣ ಹಾಗೂ ಕೃತ್ಯಕ್ಕೆ ಬಳಸಿದ್ದ ಮಾರಕಾಸ್ತ್ರ ವಶಪಡಿಸಿಕೊಳ್ಳಲಾಗಿದೆ. […]