ಮದುವೆಯಾಗುವುದಾಗಿ ನಂಬಿಸಿ ವಿಧವೆಯ 7.50 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ

ಬೆಂಗಳೂರು, ನ.30- ಮದುವೆಯಾಗುವುದಾಗಿ ನಂಬಿಸಿ ವಿಧವೆಯೊಬ್ಬರ ವಿಶ್ವಾಸಗಳಿಸಿ ಅವರ ಮನೆಯಲ್ಲೇ ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಮಾಗಡಿ ರಸ್ತೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಂಡ್ಯ ಮೂಲದ ಪ್ರದೀಪ್(35) ಬಂಧಿತ ಆರೋಪಿ. ಈತ ಬಸವೇಶ್ವರ ನಗರದಲ್ಲಿ ವಾಸವಾಗಿದ್ದನು. ದಾಸರಹಳ್ಳಿಯಲ್ಲಿ ವಾಸವಾಗಿ ರುವ ವಿಧವೆಯೊಬ್ಬರು ಮನೆ ಬಾಡಿಗೆಯಿಂದ ಜೀವನ ನಡೆಸುತ್ತಿದ್ದಾರೆ. ಈ ಮಹಿಳೆಗೆ ಮೂರು ತಿಂಗಳಿನಿಂದ ಪ್ರದೀಪ್ ಎಂಬಾತನ ಪರಿಚಯವಾಗಿ ಸ್ನೇಹಕ್ಕೆ ತಿರುಗಿದೆ. ಇವರಿಬ್ಬರು ಆಗಾಗ್ಗೆ ಮಾತ ನಾಡುತ್ತಾ ಆತ್ಮೀಯರಾಗಿದ್ದು, ಈ ಮಹಿಳೆಯ ವಿಶ್ವಾಸಗೊಳಿಸಿ ನಾನು ನಿಮ್ಮನ್ನು ಮದುವೆಯಾಗುವುದಾಗಿ ನಂಬಿಸಿ, […]

ದಾಖಲೆ ಇಲ್ಲದ 90 ಲಕ್ಷ ಮೌಲ್ಯದ ಆಭರಣ, 22 ಲಕ್ಷ ಹಣ ವಶಕ್ಕೆ

ಬೆಂಗಳೂರು, ನ.30- ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಯಾವುದೇ ದಾಖಲೆ ಇಲ್ಲದ 90 ಲಕ್ಷ ಮೌಲ್ಯದ 1 ಕೆಜಿ 800 ಗ್ರಾಂ ಚಿನ್ನಾಭರಣ ಹಾಗೂ 22 ಲಕ್ಷ ಹಣ ಪತ್ತೆಯಾಗಿದ್ದು, ಎಸ್‍ಜೆ ಪಾರ್ಕ್ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಣೇಶ್ ಎಂಬಾತ ನ.27ರಂದು ಮಧ್ಯ ರಾತ್ರಿ ಎಸ್‍ಪಿ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಬ್ಯಾಗ್ ಹಿಡಿದುಕೊಂಡು ತಿರುಗಾಡುತ್ತಿದ್ದನು. ಇದನ್ನು ಗಮನಿಸಿದ ಗಸ್ತಿನಲ್ಲಿದ್ದ ಪೊಲೀಸರು ಆತನ ಬಳಿ ಹೋಗುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದ್ದಾನೆ. 40 ಲಕ್ಷ ಮೌಲ್ಯದ […]

6.20 ಲಕ್ಷ ಮೌಲ್ಯದ ಆಭರಣ ವಶ

ಬೆಂಗಳೂರು, ನ.25- ಹಗಲು ವೇಳೆ ಬೀಗ ಹಾಕಿರುವ ಮನೆಗಳಲ್ಲಿ ಕಳವು ಮಾಡುತ್ತಿದ್ದ ಹಳೆ ಆರೋಪಿಯೊಬ್ಬನನ್ನು ಮಾಗಡಿರಸ್ತೆ ಠಾಣೆ ಪೊಲೀಸರು ಬಂಧಿಸಿ 6.20 ಲಕ್ಷ ರೂ. ಬೆಲೆಬಾಳುವ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜಾಜೀನಗರದ ಪ್ರಕಾಶ್ ನಗರ ನಿವಾಸಿ ಮಂಜುನಾಥ ಅಲಿಯಾಸ್ ಮಂಜು(40) ಬಂಧಿತ ಆರೋಪಿ. ಈತನಿಂದ 115 ಗ್ರಾಂ ತೂಕದ ಚಿನ್ನದ ವಡವೆಗಳು, 30 ಗ್ರಾಂ ಬೆಳ್ಳಿ ಕಾಲುಚೈನು, 1 ಐಫೋನ್, 1 ಪಾಸ್ಟ್ ರ್ಯಾಕ್, 2 ಟೈಮೆಕ್ಸ್ ಕೈ ಗಡಿಯಾರಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಬಂಧನದಿಂದ ನಂದಿನಿ ಲೇಔಟ್ ಠಾಣೆಯ […]

ನಕಲಿ ಚಿನ್ನಾಭರಣ ಅಡವಿಟ್ಟು ಬ್ಯಾಂಕ್‌ಗಳಿಗೆ ಪಂಗನಾಮ ಹಾಕಿದ್ದ ಆರೋಪಿಗಳ ಬಂಧನ

ಬೆಂಗಳೂರು, ನ.23- ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಡಮಾನವಿಟ್ಟು ಕೋಟ್ಯಾಂತರ ರೂ. ಸಾಲ ಪಡೆದುಕೊಂಡು ಬ್ಯಾಂಕ್ಗಳಿಗೆ ವಂಚಿಸಿದ್ದ ಮೂವರನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅರುಣ್ ರಾಜು ಕಾನಡೆ(30), ಸತ್ಯಾನಂದ ಅಲಿಯಾಸ್ ಸತ್ಯ(28) ಮತ್ತು ದತ್ತಾತ್ರೇಯ ಬಾಕಳೆ ಅಲಿಯಾಸ್ ಯಶ್(28) ಬಂಧಿತ ಆರೋಪಿಗಳು. ಕಳೆದ ಸೆಪ್ಟೆಂಬರ್ 23ರಂದು ಮಧ್ಯಾಹ್ನ 12.30ರ ಸುಮಾರಿನಲ್ಲಿ ವಿಜಯನಗರ ವ್ಯಾಪ್ತಿಯ ಬ್ಯಾಂಕ್ ಆಪ್ ಬರೋಡಾ ಶಾಖೆಗೆ ಸತ್ಯಾನಂದ ಮತ್ತು ಜಯಲಕ್ಷ್ಮೀ ಎಂಬುವರು ಸುಮಾರು 235.6 ಗ್ರಾಂ ನಕಲಿ ಚಿನ್ನಾಭರಣಗಳನ್ನು ತೆಗೆದುಕೊಂಡು ಬಂದಿದ್ದು ಜಯಲಕ್ಷ್ಮೀ […]

ಇಬ್ಬರು ಮನೆಗಳ್ಳರ ಬಂಧನ : 12.5 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು,ಸೆ.20- ಮನೆಗಳ್ಳ ತನವನ್ನೇ ಚಾಳಿಯನ್ನಾಗಿಸಿಕೊಂಡು ಹಗಲು ಮತ್ತು ರಾತ್ರಿ ವೇಳೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 12.5 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಪೀಣ್ಯಾ ನಿವಾಸಿಗಳಾದ ಕಾಂತರಾಜ್ ಅಲಿಯಾಸ್ ಮೋರಿ(45 ) ಮತ್ತು ಸುರೇಶ್ ಅಲಿಯಾಸ್ ಸೂಪರ್ ಸೂರಿ(47) ಬಂಧಿತ ಆರೋಪಿಗಳು. ಆರೋಪಿಗಳ ಬಂಧನದಿಂದ ಅಶೋಕನಗರ ಪೊಲೀಸ್ ಠಾಣೆ, ಆರ್‍ಎಂಸಿಯಾರ್ಡ್ ಹಾಗೂ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಒಂದು ಪ್ರಕರಣ ಸೇರಿ ಒಟ್ಟು 3 ಪ್ರಕರಣಗಳು ಪತ್ತೆಯಾಗಿದ್ದು, ಸುಮಾರು 12.5 ಲಕ್ಷ […]

4 ಲಕ್ಷ ಮೌಲ್ಯದ ಆಭರಣ ವಶ

ಬೆಂಗಳೂರು, ಆ.4- ರಾತ್ರಿ ವೇಳೆಯಲ್ಲಿ ಮನೆಗೆ ಹಾಕಿದ್ದ ಲಾಕ್ ಮುರಿದು ಕನ್ನಗಳವು ಮಾಡುತ್ತಿದ್ದ ಇಬ್ಬರು ಹಳೆ ಆರೋಪಿಗಳನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿ 4 ಲಕ್ಷ ಮೌಲ್ಯದ 92 ಗ್ರಾಂ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ.ಕೆಜಿ ಹಳ್ಳಿಯ ಸಯ್ಯದ್ ನದೀಂ (37) ಮತ್ತು ಸಾರಾಯಿ ಪಾಳ್ಯದ ಅಜಂ ಖಾನ್ (42) ಬಂಧಿತ ಆರೋಪಿಗಳು. ಇವರಿಬ್ಬರು ಈ ಹಿಂದೆ ಕೆಜಿ ಹಳ್ಳಿ, ಆರ್ಟಿ ನಗರ, ಗೋವಿಂದಪುರ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಹಲವಾರು ಬಾರಿ ಮನೆಕಳವು ಮಾಡಿ ಸಿಕ್ಕಿಬಿದ್ದು ಜೈಲಿಗೆ ಹೋಗಿ ಜಾಮೀನಿನ […]

ಕೆಲಸಕ್ಕಿದ್ದ ಜ್ಯುವೆಲರಿ ಅಂಗಡಿಯನ್ನೇ ದೋಚಿದ್ದ ಸೇಲ್ಸ್ ಮ್ಯಾನ್ ಸೇರಿ ಇಬ್ಬರ ಸೆರೆ

ಬೆಂಗಳೂರು,ಜು.18- ಕೆಲಸ ಮಾಡಿಕೊಂಡಿದ್ದ ಜ್ಯುವೆಲರಿ ಅಂಗಡಿಯಲ್ಲೇ ಚಿನ್ನಾಭರಣಗಳನ್ನು ಕಳವು ಮಾಡಿದ್ದ ಸೇಲ್ಸ್‍ಮ್ಯಾನ್ ಸೇರಿದಂತೆ ಇಬ್ಬರನ್ನು ಯಶವಂತಪುರ ಠಾಣೆಪೊಲೀಸರು ಬಂಧಿಸಿ 26.25 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕಾರು, ಬೈಕ್ ವಶಪಡಿಸಿಕೊಂಡಿದ್ದಾರೆ. ಚೇತನ್ ನಾಯಕ್ ಮತ್ತು ಈತನ ಸ್ನೇಹಿತ ವಿಜಯ್ ಬಂಧಿತ ಆರೋಪಿಗಳು. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ 1ನೇ ಮುಖ್ಯರಸ್ತೆಯಲ್ಲಿ ದಿ ಬೆಸ್ಟ್ ಜ್ಯುವೆಲರಿ ಎಂಬ ಅಂಗಡಿ ಇದೆ. ಈ ಅಂಗಡಿಯಲ್ಲಿ ಚೇತನ್ ನಾಯಕ್ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡಿಕೊಂಡಿದ್ದನು. ಗ್ರಾಹಕರೊಬ್ಬರು ಚಿನ್ನದ ಸರವನ್ನು ಆರ್ಡರ್ […]