ಆರೋಗ್ಯಯುತ ಜೀವನಕ್ಕೆ ಯೋಗಾಸನ ರಹದಾರಿ: ಸಚಿವ ಅಶೋಕ್

ಬೆಂಗಳೂರು ಜ.22- ರಕ್ತದೊತ್ತಡ, ಮಧುಮೇಹ ನಿಯಂತ್ರಣ ಸೇರಿದಂತೆ ಆರೋಗ್ಯಯುತ ಜೀವನ ನಡೆಸಲು ಯೋಗಾಭ್ಯಾಸವು ರಹದಾರಿಯಾಗಿದೆ. ಸದೃಢ ಮನಸ್ಸು ಮತ್ತು ಆರೋಗ್ಯಕ್ಕೆ ಯೋಗಾಸನಗಳು ಪೂರಕ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಹೊಸಕೋಟೆ ತಾಲ್ಲೂಕಿನ ಸಹಜವೇ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಪದವಿಪೂರ್ವ ಕಾಲೇಜಿನಲ್ಲಿ ನಿನ್ನೆ ರಾತ್ರಿ ವಾಸ್ತವ್ಯ ಮಾಡಿದ್ದ ಸಚಿವರು, ಇಂದು ಬೆಳಿಗ್ಗೆ ವಿದ್ಯಾರ್ಥಿಗಳ ಯೋಗ ಶಿಬಿರದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು. ಸತತ ಯೋಗಾಭ್ಯಾಸದಿಂದ […]