ರೋಷನ್ ಬೇಗ್ ಪುತ್ರ ರುಮಾನ್ ಬೇಗ್ ಬಿಜೆಪಿಗೆ

ಬೆಂಗಳೂರು, ಮಾ.23- ಮಾಜಿ ಸಚಿವ ಹಾಗೂ ಅಲ್ಪಸಂಖ್ಯಾತ ಸಮುದಾಯದಲ್ಲಿ ಪ್ರಭಾವಿ ನಾಯಕರಾಗಿದ್ದ ರೋಷನ್ ಬೇಗ್ ಹಾಗೂ ಅವರ ಪುತ್ರ ರುಮಾನ್ ಬೇಗ್ ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಐಎಂಎ ಹಗರಣದ ಕಾರಣದಿಂದಾಗಿ ರಾಜಕೀಯ ಭವಿಷ್ಯದಲ್ಲಿ ಭಾರೀ ಹಿನ್ನಡೆಯನ್ನು ಅನುಭವಿಸಿರುವ ರೋಷನ್ ಬೇಗ್ ಇದೀಗ ಪುತ್ರನ ರಾಜಕೀಯ ಭವಿಷ್ಯದ ನಿಟ್ಟಿನಲ್ಲಿ ಬಿಜೆಪಿ ನಾಯಕರ ಜೊತೆಗೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ನಡುವೆ ರೋಷನ್ ಬೇಗ್ ಪುತ್ರ ಆರ್.ರುಮಾನ್ ಬೇಗ್ ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ […]

ಭಾಸ್ಕರ್ ರಾವ್ ಸೇರಿ ಹಲವು ಮುಖಂಡರು ಬಿಜೆಪಿ ಸೇರ್ಪಡೆ

ಬೆಂಗಳೂರು,ಮಾ.1- ರಾಜ್ಯದಲ್ಲಿ ಬಿಜೆಪಿ ಅಲೆ ಇದೆ. ಬಿಜೆಪಿ ಮತ್ತೊಮ್ಮೆ ಅಕಾರಕ್ಕೆ ಬರಬೇಕೆಂಬ ನಿರೀಕ್ಷೆ ಮತ್ತು ಜನಬೆಂಬಲ ಕಾಣುತ್ತಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳೀನ್‍ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಆಪ್ ಮುಖಂಡರಿಗೆ ಧ್ವಜ ನೀಡಿ, ಶಾಲು ಹಾಕಿ ಪಕ್ಷಕ್ಕೆ ಸೇರ್ಪಡೆ ಮಾಡಿ ಮಾತನಾಡಿದರು.ಪಕ್ಷ ಗಟ್ಟಿ ಮಾಡಿ ರಾಜಕಾರಣದ ಮೂಲಕ ಸೇವೆ ಮಾಡಲು ಬಂದಿದ್ದಾರೆ. ಅವರಿಗೆ ಅಭಿನಂದನೆಗಳು […]

ಬಿಜೆಪಿ ಸೇರಿದ ಸುಮಲತಾ ಅಂಬರೀಶ್ ಅವರ ಆಪ್ತ ಸಚ್ಚಿದಾನಂದ ಮೂರ್ತಿ

ಬೆಂಗಳೂರು,ನ.28-ಹಳೇ ಮೈಸೂರು ಭಾಗದಲ್ಲಿ ಪಕ್ಷವನ್ನು ಬಲಪಡಿಸಿ ಅಧಿಕಾರದ ಗದ್ದುಗೆ ಹಿಡಿಯಲು ರಣತಂತ್ರ ರೂಪಿಸಿರುವ ಬಿಜೆಪಿ, ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಸಚ್ಚಿದಾನಂದ ಮೂರ್ತಿ ಅವರನ್ನು ಪಕ್ಷಕ್ಕೆ ಸೆಳೆದುಕೊಂಡಿದೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಂಡ್ಯ ಜಿಲ್ಲೆ ಸಂಸದೆ ಸುಮಲತಾ ಅಂಬರೀಶ್ ಅವರ ಬಲಗೈ ಬಂಟ ಎಂದು ಗುರುತಿಸಿಕೊಂಡಿದ್ದ ಸಚ್ಚಿದಾನಂದ ಅವರನ್ನು ಪಕ್ಷದ ಮುಖಂಡರು ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಆತ್ಮೀಯವಾಗಿ ಬರಮಾಡಿಕೊಂಡರು. ಸಚಿವರಾದ ನಾರಾಯಣ ಗೌಡ, ಕೆ.ಗೋಪಾಲಯ್ಯ, ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಜೆಪಿ […]