ನಾಳೆ ಬಿಜೆಪಿ ಶಾಸಕಾಂಗ ಸಭೆ, ವಿಪಕ್ಷ ದಾಳಿ ಎದುರಿಸಲು ಪ್ರತಿತಂತ್ರ
ಬೆಂಗಳೂರು,ಫೆ.14- ಅಧಿವೇಶನದಲ್ಲಿ ಪ್ರತಿಪಕ್ಷಗಳ ಅಸ್ತ್ರಕ್ಕೆ ಪ್ರತ್ಯಸ್ತ್ರ ರೂಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ಶಾಸಕಾಂಗ ಸಭೆ ಕರೆದಿದ್ದಾರೆ. ಖಾಸಗಿ ಹೋಟೆಲ್‍ನಲ್ಲಿ ನಡೆಯಲಿರುವ ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಸಚಿವರು, ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಜಂಟಿ ಅಧಿವೇಶನದಲ್ಲಿ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಆಡಳಿತಾರೂಢ ಸರ್ಕಾರದ ವಿರುದ್ಧ ಕೆಲವು ಪ್ರಚಲಿತ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಮುಗಿಬೀಳಲು ರಣತಂತ್ರ ರೂಪಿಸಿದೆ. ವಿಶೇಷವಾಗಿ ಪ್ರಸ್ತುತ ರಾಜ್ಯಾದ್ಯಂತ […]