ಬೆಂಗಳೂರು ಅಭಿವೃದ್ಧಿಗೆ 8 ಸಾವಿರ ಕೋಟಿ
ಬೆಂಗಳೂರು,ಫೆ.14- ರಾಜಧಾನಿ ಬೆಂಗಳೂರಿನಲ್ಲಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಕಾರ್ಯಗಳ ಅನುಷ್ಠಾನಕ್ಕಾಗಿ 8 ಸಾವಿರದ 15 ಕೋಟಿ ರೂ. ವೆಚ್ಚದ ಅನುಮೋದನೆ ನೀಡಲಾಗಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ತಿಳಿಸಿದರು. ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅನಿಯಮವನ್ನು ವ್ಯವಸ್ಥಿತ ಮತ್ತು ಪಾರದರ್ಶಕವಾಗಿ ರಚಿಸಿದೆ. ನಗರದಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ನಮ್ಮ ಸರ್ಕಾರ ಬದ್ದವಾಗಿದೆ ಎಂದು ಹೇಳಿದರು. ನಗರದಲ್ಲಿ ಪ್ರಯಾಣಿಕರಿಗೆ ಉತ್ತಮ ಸಾರಿಗೆ ಸೌಲಭ್ಯ ಒದಗಿಸಿಕೊಡಲು ಮೈಸೂರು ರಸ್ತೆಯಿಂದ ಕೆಂಗೇರಿವರೆಗೆ […]