ಪ್ರಶಾಂತ್ ಮಾಡಾಳ್ ಸೇರಿ ನಾಲ್ವರಿಗೆ 14 ದಿನ ನ್ಯಾಯಾಂಗ ಬಂಧನ

ಬೆಂಗಳೂರು,ಮಾ.3- ಲಂಚ ಸ್ವೀಕಾರದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಹಾಗೂ ಇತರ ನಾಲ್ವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದು ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ಪ್ರಶಾಂತ್ ಅವರ ನಿವಾಸ, ಬನಶಂಕರಿಯಲ್ಲಿರುವ ಕೆಎಸ್‍ಡಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಮಹೇಶ್ ನಿವಾಸ ಸೇರಿದಂತೆ ನಗರದಲ್ಲಿ ಮೂರು ಕಡೆ ಹಾಗೂ ಚನ್ನಗಿರಿಯಲ್ಲಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಸೇರಿದ ಎರಡು ಮನೆಗಳ ಮೇಲೆ ದಾಳಿ ನಡೆಸಿದ್ದರು. ಶಾಸಕ ಮಾಡಾಳ್ ವಿರೂಪಾಕ್ಷಪ್ಪರ […]

ಮುರುಘಾ ಶ್ರೀ ವಿರುದ್ಧ ಪಿತೂರಿ, ಬಂಧಿತರಿಗೆ 14 ದಿನ ನ್ಯಾಯಾಂಗ ಬಂಧನ

ಚಿತ್ರದುರ್ಗ,ನ.14- ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಜೈಲು ಪಾಲಾಗಿರುವ ಮುರುಘಾ ಶ್ರೀ ವಿರುದ್ಧ ಪಿತೂರಿ ನಡೆಸಿರುವ ಆರೋಪದ ಮೇಲೆ ಬಂಧಿತರಾಗಿರುವ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಂಗ ಬಂಧನದ ಅವಧಿ ಮುಗಿದ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಸೋಮವಾರ ಅವರನ್ನು ಜಿಲ್ಲಾ ಒಂದನೇ ಹೆಚ್ಚುವರಿ ಜೆಎಂಎಫ್‍ಸಿ ನ್ಯಾಯಾಲಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾೀಧಿಶರು ಆರೋಪಿಗಳಾದ ಎಸ್.ಕೆ.ಬಸವರಾಜನ್ ಹಾಗೂ ಬಸವರಾಜೇಂದ್ರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಪ್ಪಿಸಿ ಆದೇಶಿಸಿದರು. […]

ನ.3ರ ವರೆಗೆ ಮುರುಘಾಶರಣರ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗ,ಅ.21-ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ದೌರ್ಜನ್ಯ ನಡೆಸಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶರಣರ ನ್ಯಾಯಾಂಗ ಬಂಧನವನ್ನು ನ.3ರವರೆಗೆ ವಿಸ್ತರಿಸಲಾಗಿದೆ. ನ್ಯಾಯಾಂಗ ಬಂಧನದ ಅವ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಜಿಲ್ಲಾ 2ನೇ ಅಪರ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ನ.3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದರು. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮುರುಘಾ ಶ್ರೀ, 2ನೇ ಆರೋಪಿ ವಾರ್ಡನ್ ರಶ್ಮಿ ಹಾಗೂ ಇತರ ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಪ್ರಕರಣದ […]