ದಸರಾ ಗಜಪಡೆಗೆ ಫಿರಂಗಿ, ಸಿಡಿಮದ್ದು ತಾಲೀಮು
ಮೈಸೂರು,ಸೆ.17- ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈಗಾಗಲೇ ದಸರಾ ಜಂಬೂ ಸವಾರಿಯಲ್ಲಿ ಭಾಗವಹಿಸುವ ಗಜಪಡೆಗಳಿಗೆ ತಾಲೀಮು ನಡೆಯುತ್ತಿದೆ. ಇಂದು ಫಿರಂಗಿ ಮೂಲಕ ಎರಡನೇ ಬಾರಿಗೆ ಸಿಡಿಮದ್ದು ಸಿಡಿಸುವ ತಾಲೀಮು ನಡೆಸಲಾಗಿದ್ದು, ಗಜಪಡೆ, ಅಶ್ವಗಳು ಯಾವುದೂ ವಿಚಲಿತವಾಗದೇ, ತಾಲೀಮು ಯಶಸ್ವಿಯಾಗಿದೆ. ಅಕ್ಟೋಬರ್ 5ರಂದು ನಡೆಯಲಿರುವ ವಿಶ್ವವಿಖ್ಯಾತ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲಿರುವ ಗಜಪಡೆ ಮತ್ತು ಅಶ್ವಾರೋಹಿದಳದ ಕುದುರೆಗಳು ಭಾರೀ ಶಬ್ದಗಳಿಗೆ ಬೆಚ್ಚದಂತೆ ಅವು ಶಬ್ದಗಳಿಗೆ ಹೊಂದಿಕೊಳ್ಳಲು ಅನುಕೂಲವಾಗಲೆಂದು ತಾಲೀಮು ನಡೆಸಲಾಗುತ್ತಿದ್ದು, ಇಂದು ವಸ್ತು ಪ್ರದರ್ಶನ ಮೈದಾನದ ವಾಹನ ನಿಲುಗಡೆ […]