ತರುಣ್ ತಾಜ್ ಪಾಲ್ ಪ್ರಕರಣ, ವಿಚಾರಣೆ ನಿರಾಕರಿಸಿದ ನ್ಯಾಯಮೂರ್ತಿ

ನವದೆಹಲಿ,ಜ.21- ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ಅವರು ಪತ್ರಕರ್ತ ತರುಣ್ ತೇಜ್ಪಾಲ್ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.2013ರ ಅತ್ಯಾಚಾರ ಪ್ರಕರಣದಲ್ಲಿ ತಾವು ಖುಲಾಸೆಗೊಂಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆಯನ್ನು ರಹಸ್ಯವಾಗಿ ನಡೆಸಬೇಕೆಂದು ಮಾಡಿದ್ದ ಮನವಿಯನ್ನು ತಿರಸ್ಕರಿಸಿದ್ದ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ತರುಣ್ ತೇಜ್ಪಾಲ್ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಲು ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ಅವರು ನಿರಾಕರಿಸಿದ್ದಾರೆ. 2016ರಲ್ಲಿ ಒಂದು ಹಂತದಲ್ಲಿ ಈ ವಿಷಯದಲ್ಲಿ ಗೋವಾರಾಜ್ಯದ ಪರವಾಗಿ ಹಾಜರಾಗಿದ್ದೆ. ಆದ್ದರಿಂದ ಈ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿಯುತ್ತಿದ್ದೇನೆ. […]