ಸರ್ವೋಚ್ಚ ನ್ಯಾಯಾಲಯದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್

ನವದೆಹಲಿ.ಅ.11- ಭಾರತದ ಸರ್ವೋಚ್ಚ ನ್ಯಾಯಾಲಯದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿವೈ ಚಂದ್ರಚೂಡ್ ಮುಂದಿನ ತಿಂಗಳು ಪದಗ್ರಹಣ ಮಾಡಲಿದ್ದಾರೆ. ಸುಪೀಂ ಕೋರ್ಟ್ನ ಪೂರ್ಣಪ್ರಮಾಣದ ನ್ಯಾಯಮೂರ್ತಿಗಳ ಕೊಲಜಿಯಂ ಸಭೆಯಲ್ಲಿ ಚರ್ಚೆ ನಂತರ ಮುಖ್ಯ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ. ಇದರೊಂದಿಗೆ ನ್ಯಾಯಮೂರ್ತಿ ಚಂದ್ರಚೂಡ್ ಅವರು ನವೆಂಬರ್ 9 ರಂದು ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಮತ್ತು ಎರಡು ವರ್ಷಗಳ ಅಧಿಕಾರಾವಧಿಯನ್ನು ಹೊಂದಿರುತ್ತಾರೆ ಎಂದು ಮೂಲಗಳು ತಿಳಿಸಿವೆ.

ಸುಪ್ರೀಂ ಕೋರ್ಟ್ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಿಲಿತ್ ಅಧಿಕಾರ ಸ್ವೀಕಾರ

ನವದೆಹಲಿ,ಆ.27- ಸರ್ವೋಚ್ಛ ನ್ಯಾಯಾಲಯದ 49ನೇ ಮುಖ್ಯ ನ್ಯಾಯಮೂರ್ತಿಗಳಾಗಿ ಉದಯ್ ಉಮೇಶ್ ಲಲಿತ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್‍ನಲ್ಲಿ ನಡೆದ ಸಮಾರಂಭದಲ್ಲಿ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಧಿಕಾರ ಗೌಪ್ಯತೆಯನ್ನು ಬೋಧಿಸಿದರು. ಸತ್ಯ, ನ್ಯಾಯ, ನಿಷ್ಠೆ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಪ್ರತಿಜ್ಞೆಯನ್ನು ಅವರು ಮಾಡಿದರು.ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿದ್ದ ಎನ್.ವಿ.ರಮಣ ಅವರ ಅಧಿಕಾರ ಅವಧಿ ನಿನ್ನೆಗೆ ಮುಗಿದ್ದಿತ್ತು. ತೆರವಾಗಿದ ಈ ಸ್ಥಾನಕ್ಕೆ ಹಿರಿಯ ನ್ಯಾಯಮೂರ್ತಿ ಉದಯ್ ಲಲಿತ್ ಅವರನ್ನು […]

ನ್ಯಾ.ನಾಗಮೋಹನ್ ದಾಸ್ ವರದಿ ಜಾರಿಗೆ ಜಿಟಿಡಿ ಆಗ್ರಹ

ಬೆಂಗಳೂರು, ಆ.9- ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ರಾಜ್ಯ ಸರ್ಕಾರವನ್ನು ಶಾಸಕ ಜಿ.ಟಿ ದೇವೇಗೌಡರು ಆಗ್ರಹಿಸಿದ್ದಾರೆ. ಪರಿಶಿಷ್ಟ ಪಂಗಡಕ್ಕೆ ಶೇ.7.5ರಷ್ಟು ಮೀಸಲಾತಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಭೇಟಿ ನೀಡಿ ಬೆಂಬಲ ಸೂಚಿಸಿದ್ದಾರೆ. ಈ ವೇಳೆ ಮಾತನಾಡಿದ ದೇವೇಗೌಡರು, ಪರಿಶಿಷ್ಟ ಪಂಗಡಕ್ಕೆ ನ್ಯಾಯಯುತವಾದ ಮೀಸಲಾತಿ ಕೊಡಲು ಸಾಧ್ಯವಾಗದಿದ್ದರೆ ಎಲ್ಲ ವರ್ಗದ ಮೀಸಲಾತಿಯನ್ನು ರದ್ದುಗೊಳಿಸಿ, ಅನ್ಯಾಯಕ್ಕೆ ಒಳಗಾಗಿರುವ ಬಡತನ ರೇಖೆಯಲ್ಲಿರುವ […]

ಬಿಜೆಪಿ ಸರ್ಕಾರದಲ್ಲಿ ಯಾರಿಗೂ ನ್ಯಾಯ ಸಿಗುತ್ತಿಲ್ಲ: ಡಿಕೆಶಿ

ಬೆಂಗಳೂರು,ಜು.16- ರಾಜ್ಯ ಸರ್ಕಾರ ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿದೆ. ಯಾರಿಗೂ ನ್ಯಾಯ ಸಿಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಎಸ್.ಈಶ್ವರಪ್ಪ ಅವರು ಮಂತ್ರಿಯಾಗಿದ್ದಾಗ ಶೇ.40ರಷ್ಟು ಕಮಿಷನ್‍ಗೆ ಒತ್ತಡ ಹೇರಿದ್ದರು ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಕರಣದಲ್ಲಿ ಈಗಲೂ ನ್ಯಾಯ ಸಿಕ್ಕಿಲ್ಲ. ಅವರ ಪತ್ನಿ ರಾಜ್ಯಪಾಲರಿಗೆ ಪತ್ರ ಬರೆದು ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಸಚಿವರಾದ ಗೋವಿಂದಕಾರಜೋಳ, ಮುರುಗೇಶ್ ನಿರಾಣಿ ಸೇರಿದಂತೆ ಅನೇಕರು ಸಂತೋಷ್ ಪಾಟೀಲ್ ಗುತ್ತಿಗೆ ಕೆಲಸ […]