ಗಡಾಯಿಕಲ್ಲು ಗುಡ್ಡ ಏರಿ ಕನ್ನಡದ ಬಾವುಟ ಹಾರಿಸಿ ಸಂಭ್ರಮಿಸಿದ ಜ್ಯೋತಿರಾಜ್

ಬೆಳ್ತಂಗಡಿ, ಫೆ.13- ತಾಲೂಕಿನ ನಡ ಗ್ರಾಮದಲ್ಲಿರುವ ಐತಿಹಾಸಿಕ ಕೋಟೆಯಾದ ಗಡಾಯಿ ಕಲ್ಲು ಅಥವಾ ನರಸಿಂಹ ಘಢವನ್ನು ಚಿತ್ರದುರ್ಗದ ಸಾಹಸಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಯಾವುದೇ ಸುರಕ್ಷತಾ ಪರಿಕರಗಳಿಲ್ಲದೆ ಏರಿ ತಮ್ಮ ಸಾಹಸ ಮೆರೆದಿದ್ದಾರೆ. ತನ್ನ ತಂಡದೊಂದಿಗೆ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅರ್ಚಕ ಗಣೇಶ್ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿ ಹೊರಟ ಜ್ಯೋತಿರಾಜ್ ಇಲ್ಲಿಂದ ಸುಮಾರು ಎರಡು ಕಿಮೀ ದೂರವನ್ನು ಕಾಡುದಾರಿ ಮೂಲಕ ಕ್ರಮಿಸಿ ಗಂಟೆ 9.50ರ ಸುಮಾರಿಗೆ ಬರಿಗೈ ಮೂಲಕ ಗಡಾಯಿಕಲ್ಲನ್ನು […]