ಕೋಲಾರದಿಂದಲೇ ಕಣಕ್ಕಿಳಿಯಲು ಸಿದ್ದರಾಮಯ್ಯ ಪೂರ್ವ ತಯಾರಿ, ಮುನಿಯಪ್ಪ ಜೊತೆ ಮೀಟಿಂಗ್

ಬೆಂಗಳೂರು,ಜ.9- ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಇಂದು ಬೆಳಗ್ಗೆ ಸಿದ್ದರಾಮಯ್ಯ ಕೆಲ ಕಾಂಗ್ರೆಸ್ ನಾಯಕರ ಜೊತೆ ಕೋಲಾರದ ಪ್ರಮುಖ ನಾಯಕ ಹಾಗೂ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವ ಎಂ.ಆರ್.ಸೀತಾರಾಂ, ವಿಧಾನ ಪರಿಷತ್ ಮಾಜಿ ಸದಸ್ಯ ನಾರಾಯಣಸ್ವಾಮಿ, ಮಾಜಿ ಸಂಸದರಾದ ನಾರಾಯಣಸ್ವಾಮಿ, ಚಂದ್ರಪ್ಪ ಹಾಗೂ ಮತ್ತಿತರರು ಜೊತೆಯಲ್ಲಿದ್ದರು. ಇಂದು ಬೆಳಗ್ಗೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕ್ರಮವೊಂದರಲಿ ಭಾಗವಹಿಸುವ ಸಿದ್ದರಾಮಯ್ಯ […]

ಚುನಾವಣೆಯಲ್ಲಿ ಗೆಲವು ಕಷ್ಟವಾಗಬಹುದು : ಸಿದ್ದರಾಮಯ್ಯಗೆ ಮುನಿಯಪ್ಪ ಎಚ್ಚರಿಕೆ

ಬೆಂಗಳೂರು, ನ.16- ಕಳೆದ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದವರ ಮುಂದಾಳತ್ವದಲ್ಲಿ ಚುನಾವಣೆ ನಡೆಸಿದರೆ ಗೆಲವು ಕಷ್ಟವಾಗಬಹುದು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ ಜಿಲ್ಲಾ ಕಾಂಗ್ರೆಸ್ಸಿನಲ್ಲಿರುವ ಸಮಸ್ಯೆಗಳನ್ನು ಸರಿಪಡಿಸಿಕೊಂಡು ಬಳಿಕ ಸ್ಪರ್ಧೆ ಮಾಡುವಂತೆ ಸಲಹೆ ಮಾಡಿದ್ದಾರೆ. ಸಿದ್ದರಾಮಯ್ಯ ಪ್ರಭಾವಿ ನಾಯಕರು, ರಾಜ್ಯದ ಯಾವುದೇ ಕ್ಷೇತ್ರದಲ್ಲಿ ನಿಂತರೂ ಗೆಲ್ಲುತ್ತಾರೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ […]