ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎಲ್.ಮಂಜುನಾಥ್ ಹೃದಯಾಘಾತದಿಂದ ನಿಧನ

ಬೆಂಗಳೂರು, ಜ.23- ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ, ಕರ್ನಾಟಕ ನದಿನೀರು ಹಾಗೂ ಗಡಿ ವಿವಾದ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಎಲ್.ಮಂಜುನಾಥ್ (68) ಅವರು ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೆಆರ್ ಪೇಟೆ ತಾಲ್ಲೂಕಿನ ಕಿಕ್ಕೇರಿ ತೋಟದ ಮನೆಯಲ್ಲಿ ನಿನ್ನೆ ರಾತ್ರಿ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ತೀವ್ರ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ. ಕೆ.ಎಲ್.ಮಂಜುನಾಥ್ ಅವರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ತಡರಾತ್ರಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನ […]