ಕೈಗಾರಿಕೆ-ವಾಣಿಜ್ಯೋದ್ಯಮ ಸಾಧನೆಯಲ್ಲಿ ಕರ್ನಾಟಕಕ್ಕೆ ಅಗ್ರಸ್ಥಾನ : ಕೆ.ರತ್ನಪ್ರಭಾ
ಬೆಂಗಳೂರು,ಮಾ.10- ದೇಶದಲ್ಲಿಯೇ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮ ಕ್ಷೇತ್ರದಲ್ಲಿ ರಾಜ್ಯ ಸತತವಾಗಿ ಅಗ್ರಸ್ಥಾನ ಕಾಯ್ದುಕೊಂಡು ಬಂದಿದೆ ಎಂದು ಮಾಜಿ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಹೇಳಿದರು. ಹಾರೋಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಎಸ್‍ಎಜೆ ಫುಡ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್‍ನ ಆರನೇ ಬಿಸ್ಕೆಟ್ ಹಾಗೂ ಬೇಕರಿ ಉತ್ಪನ್ನಗಳ ಕಾರ್ಖಾನೆಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಿ ಅವರು ಮಾತನಾಡಿದರು. 2014-16ನೇ ಸಾಲಿನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಅಕಾರ ವಹಿಸಿಕೊಂಡಿದೆ. ಆಗ ಆ ಸ್ಥಾನಕ್ಕೆ ಬಂದ ಮೊದಲ ಮಹಿಳೆ ಎನ್ನುವ ಹೆಗ್ಗಳಿಕೆ […]