ಕಾಂಗ್ರೆಸ್‍ಗೆ ಜನರೇ ಛೀಮಾರಿ ಹಾಕ್ತಾರೆ : ಡಾ.ಕೆ.ಸುಧಾಕರ್ ವಾಗ್ದಾಳಿ

ಬೆಂಗಳೂರು,ಜ.8- ಸರ್ಕಾರದ ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ವಿರೋಧ ಪಕ್ಷ ಕಾಂಗ್ರೆಸ್‍ಗೆ ಜನರೇ ಛೀಮಾರಿ ಹಾಕುತ್ತಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ವಾಗ್ದಾಳಿ ನಡೆಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡೀ ವಿಶ್ವದಲ್ಲೇ ಅಲ್ಲಿನ ಸರ್ಕಾರಗಳು ಜಾರಿಗೆ ತಂದ ನಿಯಮಗಳಿಗೆ ವಿರೋಧ ಪಕ್ಷಗಳು ಸಂಪೂರ್ಣ ಬೆಂಬಲ ನೀಡಿವೆ. ಆದರೆ ನಮ್ಮಲ್ಲಿ ಮಾತ್ರ ವಿರೋಧ ವ್ಯಕ್ತಪಡಿಸುತ್ತಿರುವುದು ದುರದೃಷ್ಟಕರ ಎಂದು ಟೀಕಿಸಿದರು. ಕಾಂಗ್ರೆಸ್‍ನವರು ಪಾದಯಾತ್ರೆ ಮಾಡುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಅವರು ಪಾದಯಾತ್ರೆಯನ್ನಾದರೂ ಮಾಡಲಿ, ಎತ್ತಿನ ಗಾಡಿಯಲ್ಲಾದರೂ ಹೋಗಲಿ, […]