ಜನರಿಗೆ ತೊಂದರೆ ಕೊಟ್ಟು ನೈಟ್‍ ಕರ್ಫ್ಯೂ ವಿಧಿಸುವ ಉದ್ದೇಶ ಸರ್ಕಾರಕ್ಕಿಲ್ಲ : ಸಚಿವ ಸುಧಾಕರ್

ಬೆಂಗಳೂರು, ಜ.20- ರಾಜ್ಯದಲ್ಲಿ ವಾರಾಂತ್ಯದ ಲಾಕ್‍ಡೌನ್ ಹಾಗೂ ನೈಟ್‍ಕರ್ಫ್ಯೂ ಬೇಕೆ, ಬೇಡವೇ ಎಂಬುದನ್ನು ವೈಜ್ಞಾನಿಕ ನೆಲೆಗಟ್ಟಿನಲ್ಲಿ ಚಿಂತಿಸಿ ಸರ್ಕಾರ ಸೂಕ್ತವಾದ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರಿಗೆ ತೊಂದರೆ ಕೊಟ್ಟು ಇಲ್ಲವೆ ಅವರ ದೈನಂದಿನ ಚಟುವಟಿಕೆಗಳಿಗೆ ಅಡ್ಡಿಪಡಿಸಿ ಲಾಕ್‍ಡೌನ್ ಇಲ್ಲವೆ ನೈಟ್‍ ಕರ್ಫ್ಯೂ ವಿಸ್ತರಣೆ ಮಾಡಬೇಕೆಂಬ ದುರುದ್ದೇಶ ಸರ್ಕಾರಕ್ಕೂ ಇಲ್ಲ. ಏನೇ ಕ್ರಮ ಕೈಗೊಂಡರೂ ವೈಜ್ಞಾನಿಕ ನೆಲೆಗಟ್ಟಿನ ಮೇಲೆ ಇರುತ್ತದೆ ಎಂದು ಸ್ಪಷ್ಟಪಡಿಸಿದರು. […]