ಆಸ್ಪತ್ರೆ ಸೇರುವ ಸೋಂಕಿತರ ಸಂಖ್ಯೆ ಹೆಚ್ಚಾದರೆ ಮತ್ತೆ ಬಿಗಿ ಕ್ರಮ : ಸಚಿವ ಸುಧಾಕರ್

ಬೆಂಗಳೂರು,ಜ.22- ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾದರೆ ಸರ್ಕಾರ ಬಿಗಿ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ. ಸದ್ಯಕ್ಕೆ ಕೋವಿಡ್ ಸೋಂಕು ಕಾಣಿಸಿಕೊಂಡವರು ಆಸ್ಪತ್ರೆಗೆ ದಾಖಲಾಗುತ್ತಿರುವುದು ತುಂಬಾ ಕಡಿಮೆ ಇದೆ. ಈ ತಿಂಗಳ ಅಂತ್ಯ ಹಾಗೂ ಫೆಬ್ರವರಿ 2ನೇ ವಾರದವರೆಗೂ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತದೆ ಎಂದು ತಜ್ಞರು ಹೇಳಿದ್ದಾರೆ. ಜನರ ಆರೋಗ್ಯದಲ್ಲಿ ಏರು-ಪೇರು ಕಂಡರೆ ನಾವು ಬಿಗಿಯಾದ ಕ್ರಮ ತೆಗೆದುಕೊಳ್ಳಬೇಕಾಗುತ್ತದೆ ಎಂದು ಹೇಳಿದರು. […]

ಜನರ ಪ್ರಾಣ ರಕ್ಷಣೆ ಸರ್ಕಾರದ ಮೊದಲ ಆದ್ಯತೆ : ಸಚಿವ ಕೆ.ಸುಧಾಕರ್

ಬೆಂಗಳೂರು,ಜ.19- ಜನರ ಪ್ರಾಣ ರಕ್ಷಣೆ ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಶುಕ್ರವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ಮುಖ್ಯಮಂತ್ರಿಯವರು ಜನಪರವಾದ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರ ಪ್ರಾಣ ರಕ್ಷಣೆ ಹಾಗೂ ಜೀವನ ನಿರ್ವಹಣೆಗೆ ತೊಂದರೆಯಾಗದಂತೆ ಜನಪರವಾದ ತೀರ್ಮಾನವನ್ನು ತೆಗೆದುಕೊಳ್ಳಲಿದ್ದೇವೆ. ಪ್ರತಿಯೊಬ್ಬರ ಪ್ರಾಣ ರಕ್ಷಣೆ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದರು. ನಾವು ಜನರಿಗೆ ತೊಂದರೆ ಕೊಟ್ಟು ಲಾಕ್‍ಡೌನ್ ಇಲ್ಲವೇ ಕಫ್ರ್ಯೂ ವಿಸಬೇಕಾದ ಅವಶ್ಯಕತೆ […]