ಕಾಡುಗೊಲ್ಲ ಸಮುದಾಯದ ಸಮಸ್ಯೆಗಳಿಗೆ ಸ್ಪಂದಿಸುವುದಾಗಿ ಕೇಂದ್ರ ಸಚಿವರ ಭರವಸೆ

ಬೆಂಗಳೂರು, ಫೆ.6- ಆರ್ಥಿಕವಾಗಿ, ಸಾಮಾಜಿಕವಾಗಿ ಹಿಂದುಳಿದಿರುವ ಕಾಡುಗೊಲ್ಲ ಸಮುದಾಯದ ಅಭಿವೃದ್ಧಿಗೆ ಪೂರಕವಾಗಿ ಕೇಂದ್ರ ಸರ್ಕಾರ ಕೆಲಸ ಮಾಡಲಿದೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಇಂದಿಲ್ಲಿ ಹೇಳಿದರು. ನಾವು ಕಾಡುಗೊಲ್ಲರು ಎಂಬ ಕಾಡುಗೊಲ್ಲರ ಜೀವನಶೈಲಿ ಕುರಿತಾತ ಸಾಕ್ಷ್ಯಚಿತ್ರ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಡುಗೊಲ್ಲ ಬುಡಕಟ್ಟು ಸಮುದಾಯದವರು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಈ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಮುಖಂಡರು ಮನವಿ ಸಲ್ಲಿಸಿದ್ದಾರೆ. ಅದಕ್ಕೆ ಸರ್ಕಾರ ಪೂರಕವಾಗಿ ಸ್ಪಂದಿಸಲಿದೆ ಎಂದು ಸಚಿವರು ಭರವಸೆ ನೀಡಿದರು. ಕರ್ನಾಟಕ ರಾಜ್ಯ ಕಾಡುಗೊಲ್ಲ ಸಂಘದ ರಾಜ್ಯಾಧ್ಯಕ್ಷ […]