ಹಕ್ಕುಗಳ ಜೊತೆಗೆ ಕರ್ತವ್ಯ ಪಾಲನೆ ಮಾಡಲು ಸ್ಪೀಕರ್ ಕಾಗೇರಿ ಕರೆ

ಬೆಂಗಳೂರು ಜ.26- ಸಂವಿಧಾನದತ್ತವಾದ ಹಕ್ಕುಗಳಿಗೆ ಒತ್ತಾಯಿಸುವುದಕ್ಕಷ್ಟೇ ಸೀಮಿತವಾಗದೆ, ಹಕ್ಕುಗಳ ಜೊತೆಗೆ ನಮ್ಮ ಕರ್ತವ್ಯವನ್ನು ಪಾಲಿಸಲು ಗಮನ ಹರಿಸಬೇಕು ಎಂದು ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕರೆ ನೀಡಿದರು. 73ನೇ ಗಣರಾಜ್ಯೋತ್ಸವದ ಅಂಗವಾಗಿ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರೊಂದಿಗೆ ಶಾಸಕರ ಭವನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ, ಗೌರವ ವಂದನೆ ಸಲ್ಲಿಸಿ ಮಾತನಾಡಿದ ಅವರು, ದೇಶದ ಏಕತೆ, ಸಮಗ್ರತೆ ಮತ್ತು ಸುರಕ್ಷತೆಯ ರಕ್ಷಣೆಯ ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಮತ್ತು ಜವಾಬ್ದಾರಿಯಾಗಿದೆ ಎಂದರು. ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುತ್ತಾ, ಆಡಳಿತದ ಗುಣಮಟ್ಟವನ್ನು […]