ಕಲಬುರಗಿ ಇಎಸ್‍ಐ ಆಸ್ಪತ್ರೆ ಪುನಃಶ್ಚೇತನಕ್ಕೆ ಸೂಚನೆ : ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು,ಫೆ.16- ಮೂಲಭೂತ ಸೌಕರ್ಯಗಳಿಲ್ಲದೆ ನಿರ್ಲಕ್ಷ್ಯಕ್ಕೆ ಒಳಗಾಗಿ ರುವ ಕಲಬುರಗಿ ಜಿಲ್ಲೆಯ ಶಹಬಾದ್ ಪಟ್ಟಣದಲ್ಲಿರುವ ಇಎಸ್‍ಐ ಆಸ್ಪತ್ರೆಯನ್ನು ಪುನಃಶ್ಚೇತನಗೊಳಿಸಲು ತಕ್ಷಣವೇ ಕ್ರಿಯಾಯೋಜನೆ ರೂಪಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಈ ಸಂಬಂಧ ಬೆಂಗಳೂರಿನ ವಿಧಾನ ಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕಲ್ಪನಾ, ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಷ ಸೇರಿದಂತೆ ಮತ್ತಿತರ ಅಕಾರಿಗಳಜೊತೆ ಸಭೆ ನಡೆಸಿ, ಶಹಬಾದ್‍ನ ಇಎಸ್‍ಐ ಆಸ್ಪತ್ರೆಯನ್ನು ಪುನಃಶ್ಚೇತನಗೊಳಿಸಲು ಕ್ರಿಯಾ […]