ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾಳೆಯಿಂದ ಪಂಚರತ್ನ ರಥಯಾತ್ರೆ

ಬೆಂಗಳೂರು, ಜ.4- ಜೆಡಿಎಸ್‍ನ ಮಹತ್ವದ ಪಂಚರತ್ನ ರಥಯಾತ್ರೆಯ ಎರಡನೇ ಹಂತವು ನಾಳೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಾರಂಭವಾಗಲಿದೆ. ಬೀದರ್ ನಿಂದ ನಾಳೆ ಆರಂಭವಾಗಲಿರುವ ಎರಡನೇ ಹಂತದ ಯಾತ್ರೆಯು ಜನವರಿ 12ರವರೆಗೆ ಒಟ್ಟು 8 ದಿನಗಳ ಕಾಲ ನಡೆಯಲಿದೆ. ಬೀದರ್ ಹಾಗೂ ಕಲ್ಬುರ್ಗಿ ಜಿಲ್ಲೆಗಳ ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚರತ್ನ ರಥಯಾತ್ರೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆಯಿಂದ ಜ.8ರವರೆಗೆ ಬೀದರ್ ಉತ್ತರ, ಬೀದರ್ ದಕ್ಷಿಣ, ಹುಮ್ನಾಬಾದ್ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚರತ್ನ ಪಂಚರತ್ನ ಯಾತ್ರೆ ಹಮ್ಮಿಕೊಳ್ಳಲಾಗುತ್ತದೆ. ಜ.9ರಿಂದ […]