“ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಸೀಟು ಮೀಸಲಾತಿಯಲ್ಲಿ ರಾಜಿಯಿಲ್ಲ’

ಬೆಂಗಳೂರು,ಮಾ.8- ಕಲ್ಯಾಣ ಕರ್ನಾಟಕ ಭಾಗದ 371(ಜೆ) ಅಡಿಯಲ್ಲಿ ಇರುವ ಮೀಸಲಾತಿಗೆ ಅನುಗುಣವಾಗಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರವೇಶಕ್ಕೆ ಆದೇಶ ಮಾಡಲಾಗಿದ್ದು ಸರ್ಕಾರ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಶೂನ್ಯವೇಳೆಯಲ್ಲಿ ಶಾಸಕ ಶಿವರಾಜ್ ಪಾಟೀಲ್ ಮತ್ತಿತರರು ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಸಚಿವರು, ಮೀಸಲಾತಿ ಅನ್ವಯ ದಾಖಲಾತಿಗೆ ಆದೇಶ ಮಾಡಲಾಗಿದ್ದು ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ನವೋದಯ ಮೆಡಿಕಲ್ ಕಾಲೇಜು ನ್ಯಾಯಾಲಯದಲ್ಲಿ ತಡೆಯಾಜ್ಞೆ ತಂದಿದೆ. ಆದರೂ ಆ ಪ್ರವೇಶದ ವಿದ್ಯಾರ್ಥಿಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಇಂದು ತಡೆಯಾಜ್ಞೆ ಸಂಬಂಧ […]