ಕಾಂಗ್ರೆಸ್ ಪಾದಯಾತ್ರೆ : ಡಿಕೆಶಿ, ಸಿದ್ದರಾಮಯ್ಯ ಸೇರಿದಂತೆ 64 ಮಂದಿ ವಿರುದ್ಧ 3ನೇ ಎಫ್‍ಐಆರ್

ಕನಕಪುರ, ಜ.12- ಕೋವಿಡ್ ಸೋಂಕು ನಿಯಂತ್ರಿಸುವ ಸಲುವಾಗಿ ಸರ್ಕಾರ ರ್ಯಾಲಿ, ಪ್ರತಿಭಟನೆ ನಿಷೇಧಿಸಿದ್ದರೂ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ಮೂರನೆ ಎಫ್‍ಐಆರ್ ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.ಮೇಕೆದಾಟು ಯೋಜನೆಯ ಅನುಷ್ಠಾನ ಕುರಿತಂತೆ ಹಮ್ಮಿಕೊಂಡಿರುವ ಪಾದಯಾತ್ರೆಯ ಆಯೋಜಕರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಂಸದ ಡಿ.ಕೆ.ಸುರೇಶ್, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ 64 ಮಂದಿ ವಿರುದ್ಧ ಕನಕಪುರ ಟೌನ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸರ್ಕಾರದ ಆದೇಶ ಉಲ್ಲಂಘಿಸಿ ಸಭೆ, ಪಾದಯಾತ್ರೆ ನಡೆಸಿದ ಆರೋಪದ ಮೇಲೆ ಕನಕಪುರ ತಹಸೀಲ್ದಾರ್ […]