ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಸ್ಥಳ ಮಂಜೂರು

ಬೆಂಗಳೂರು ಫೆ.7- ಕೇಂದ್ರ ಸರ್ಕಾರ ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಿದ 15 ವರ್ಷಗಳ ಬಳಿಕ ಮೈಸೂರಿನ ಶಾಸ್ತ್ರೀಯ ಕನ್ನಡ ಅಧ್ಯಯನ ಕೇಂದ್ರಕ್ಕೆ ಶಾಶ್ವತ ಸ್ಥಳವನ್ನು ಮಂಜೂರು ಮಾಡಲು ನಿರ್ಧರಿಸಿದೆ.ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿರುವ ಜಯಲಕ್ಷ್ಮೀ ವಿಲಾಸ ಭವನಕ್ಕೆ ಕೇಂದ್ರವನ್ನು ಸ್ಥಳಾಂತರಿಸಲಾಗುತ್ತದೆ. ಮೈಸೂರು ವಿಶ್ವವಿದ್ಯಾನಿಲಯ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡುವಿನ ತಿಳುವಳಿಕೆ ಒಪ್ಪಂದದ ಸಿದ್ಧತೆ ಅಂತಿಮ ಹಂತದಲ್ಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಮತ್ತೆ ರೆಪೊ ದರ ಏರಿಸಿದ […]