ನೆಲ, ಜಲ, ಭಾಷೆ ಸಮಸ್ಯೆ ನಿವಾರಣೆಗೆ ಕನ್ನಡ ಸಂಘಟನೆಗಳನ್ನು ಒಗ್ಗೂಡಿಸಲು ಮುಂದಾದ ಎಚ್‍ಡಿಕೆ

ಬೆಂಗಳೂರು,ಫೆ.3- ನೆಲ, ಜಲ ಮತ್ತು ಭಾಷೆಯ ವಿಚಾರದಲ್ಲಿ ರಾಜ್ಯವು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಂದಿನ ವಾರ ಎಲ್ಲ ಕನ್ನಡಪರ ಸಂಘಟನೆಗಳ ಮುಖಂಡರ ಜತೆ ಮಹತ್ವದ ಸಭೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಬಿಡದಿಯ ತಮ್ಮ ತೋಟದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಸಂಘಟನೆಗಳ ಮುಖಂಡರ ಜತೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯವು ಅನೇಕ ಜ್ವಲಂತ ಸಮಸ್ಯೆಗಳನ್ನು ಎದುರಿಸುತ್ತಿದೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಾವು ಅನೇಕ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದೇವೆ. […]