ಹಾವೇರಿಯ ಅದ್ಧೂರಿ ಅಕ್ಷರ ಜಾತ್ರೆಗೆ ಇಂದು ತೆರೆ

ಹಾವೇರಿ, ಜ.8- ಕನಕನ ನಾಡು ಸಾಮರಸ್ಯದ ಬೀಡು ಹಾವೇರಿಯಲ್ಲಿ ಜ.6ರಿಂದ ಆರಂಭವಾದ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕಿಂದು ತೆರೆ ಬಿದ್ದಿದೆ. ರಾಜ್ಯದ ನಾನಾ ಭಾಗಗಳಿಂದ ತಾಯಿ ಭುವನೇಶ್ವರಿ ಸ್ಮರಣೆಗೆ ತಂಡೋಪತಂಡವಾಗಿ ಟ್ರ್ಯಾಕ್ಟರ್, ಬಸ್, ಕಾರು ಹಾಗೂ ಟೆಂಪೊಗಳಲ್ಲಿ ಬಂದ ಸಹಸ್ರಾರು ಜನ ಸಾಹಿತಿಗಳ ಮಾತು-ಮಂಥನ, ಗೋಷ್ಠಿಗಳಲ್ಲಿ ಮಿಂದೆದ್ದರು. ಅಲ್ಲದೆ, ಸಂಜೆ ಹಾಸ್ಯ ಕಲಾವಿದರು, ಸ್ಥಳೀಯ ಕಲಾವಿದರು, ಮಕ್ಕಳ ನೃತ್ಯ ಹೀಗೆ ಹತ್ತು ಹಲವು ಮನರಂಜನಾ ಕಾರ್ಯಕ್ರಮಗಳು ನೆರೆದ ಜನರನ್ನು ಕೊರೆವ ಚಳಿಯಲ್ಲೂ ಮಧ್ಯರಾತ್ರಿ ವರೆಗೂ ಹಿಡಿದಿಟ್ಟಿದ್ದವು. […]

ಕನ್ನಡಕ್ಕೆ ಸ್ಪಂದಿಸದ ಬ್ಯಾಂಕ್‍ಗಳನ್ನ ಧಿಕ್ಕರಿಸಿ : ದೊಡ್ಡರಂಗೇಗೌಡರು

ಹಾವೇರಿ,ಜ.6- ಕನ್ನಡ ಭಾಷೆಯಲ್ಲಿ ಕಾರ್ಯನಿರ್ವಹಿಸದ ಬ್ಯಾಂಕುಗಳು, ಸರ್ಕಾರಿ ಉದ್ಯಮಿಗಳು, ಖಾಸಗಿ ಸಂಸ್ಥೆಗಳನ್ನು ಮುಲಾಜಿಲ್ಲದೆ ಧಿಕ್ಕರಿಸಬೇಕು. ಹಾಗಿದ್ದರೆ ಮಾತ್ರ ಮಾತೃಭಾಷೆ ಉಳಿಯಲು ಸಾಧ್ಯ ಎಂದು 86ನೇ ಅಖಿಲ ಭಾರತ ಸಮ್ಮೇಳನದ ಅಧ್ಯಕ್ಷರಾದ ಸಾಹಿತಿ ಡಾ. ದೊಡ್ಡರಂಗೇಗೌಡ ಕರೆ ನೀಡಿದ್ದಾರೆ. ಇಂದಿನಿಂದ ಇಲ್ಲಿನ ಕನಕದಾಸ- ಶ ರೀಫ- ಸರ್ವಜ್ಞ ವೇದಿಕೆಯಲ್ಲಿ ಆರಂಭವಾದ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕರ್ನಾಟಕದೆಲ್ಲೆಡೆ ಕನ್ನಡದಲ್ಲೇ ಸೇವೆ ನೀಡುವಂತೆ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಲ್ಲಿ ಬಲವಾಗಿ ಆಗ್ರಹಿಸಿದರೆ ಸಹಜವಾಗಿ ಉದ್ಯೋಗಗಳಲ್ಲಿ ಕನ್ನಡಿಗರ ಸಂಖ್ಯೆ […]

ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಶೇ.80ರಷ್ಟು ಉದ್ಯೋಗ ಕಡ್ಡಾಯಕ್ಕೆ ಕಾನೂನು : ಬೊಮ್ಮಾಯಿ

ಹಾವೇರಿ,ಜ.6- ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಶೇ.80ರಷ್ಟು ಉದ್ಯೋಗ ಕೊಡುವ ಕಾನೂನನ್ನು ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆಯಲ್ಲಿ ಆರಂಭವಾದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಉದ್ಘಾಟನಾ ಭಾಷಣ ಮಾಡಿದ ಅವರು, ತಮ್ಮ 20 ನಿಮಿಷಗಳ ಭಾಷಣದಲ್ಲಿ ಕನ್ನಡ, ಸಾಹಿತ್ಯ, ಸಂಸ್ಕøತಿ, ಭಾಷೆ, ಬೆಳೆದು ಬಂದ ಪರಂಪರೆ ಸೇರಿದಂತೆ ಹತ್ತು ಹಲವು ವಿಷಯಗಳನ್ನು ಪ್ರಸ್ತಾಪಿಸಿದರು. ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಕೊಡಬೇಕು […]

ಸಿಂಗಾರಗೊಂಡ ಸಿಎಂ ತವರು ಜಿಲ್ಲೆ ಹಾವೇರಿ, ಅಕ್ಷರ ಜಾತ್ರೆಗೆ ಕ್ಷಣಗಣನೆ

ಬೆಂಗಳೂರು, ಜ.4- ಮುಖ್ಯಮಂತ್ರಿಗಳ ತವರು ಜಿಲ್ಲೆ ಹಾವೇರಿಯಲ್ಲಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಹಾವೇರಿ-ಹುಬ್ಬಳ್ಳಿ ರಸ್ತೆಯ ಶ್ರೀ ಅಜ್ಜಯ್ಯ ದೇವಸ್ಥಾನದ ಎದುರು ವೇದಿಕೆ ಈಗಾಗಲೇ ಸಿದ್ದಗೊಂಡಿದ್ದು, ಅಂತಿಮ ಹಂತದಲ್ಲಿ ಸಿಂಗಾರ ಕಾರ್ಯ ನಡೆಯುತ್ತಿದೆ. ಜ. 6ರಿಂದ 8ರವರೆಗೆ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದ್ದು, ಇಡೀ ನಗರ ಕನ್ನಡ ಬಾವುಟ ಹಾಗೂ ಸಾಹಿತಿಗಳು, ಮಹಾಪುರುಷರ ಕಟೌಟ್‍ಗಳಿಂದ ರಾರಾಜಿಸುತ್ತಿದ್ದು, ಅಕ್ಷರ ಜಾತ್ರೆಗೆ ಲಕ್ಷಾಂತರ ಜನ ಭೇಟಿ ನೀಡುವ ಸಾಧ್ಯತೆ ಇರುವುದರಿಂದ ಎಲ್ಲರಿಗೂ […]

ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಕೊರೋನ ಕರಿನೆರಳು

ಬೆಂಗಳೂರು,ಡಿ.24- ಐದು ಬಾರಿ ಮುಂದೂಡಲ್ಪಟ್ಟಿರುವ ವಾರ್ಷಿಕ ಕನ್ನಡ ಸಾಹಿತ್ಯ ಸಮ್ಮೇಳನದ ಮೇಲೆ ಈಗ ಕೊರೋನಾದ ಕರಿನೆರಳು ಬೀಳುವ ಸಾಧ್ಯತೆ ಇದೆ. ಈಗಾಗಲೇ ಘೋಷಿಸಿರುವ ವೇಳಾಪಟ್ಟಿಯಂತೆ 2023ರ ಜನವರಿ 6ರಿಂದ ಮೂರು ದಿನಗಳ ಕಾಲ ಹಾವೇರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕಳೆದ ಮೂರು ವರ್ಷಗಳಿಂದ ಕೋವಿಡ್ ಕಾರಣಕ್ಕಾಗಿಯೇ ಸಮ್ಮೇಳನ ನಡೆದಿರಲಿಲ್ಲ. ಈಗ ಮತ್ತೆ ಕೋವಿಡ್ ಭೀತಿ ಎದುರಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾ ಸಂಘಟನಾ ಸಮಿತಿಗಳು ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿವೆ. ಸಮ್ಮೇಳನಕ್ಕೆ ಕನಿಷ್ಠ ಮೂರು ಲಕ್ಷ […]

ಪ್ಲಾಸ್ಟಿಕ್ ಮುಕ್ತವಾಗಿರಲಿದೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು,ನ.27- ಜನವರಿ 6ರಿಂದ ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನವು ಪ್ಲಾಸ್ಟಿಕ್ ಮುಕ್ತವಾಗಿರಲಿದೆ. ಮೂರು ದಿನಗಳ ಕಾಲ ನಡೆಯಲಿರುವ ಕಾರ್ಯಕ್ರಮದಲ್ಲಿ 3ರಿಂದ 4 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಪ್ಲಾಸ್ಟಿಕ್ ವಸ್ತುಗಳನ್ನು ದೂರವಿಡುವ ಮೂಲಕ ಇದನ್ನು ಯಶಸ್ವಿಯಾಗಿಸಲು ಸಂಘಟನಾ ಸಮಿತಿ ಶ್ರಮಿಸುತ್ತಿದೆ. ಪ್ರಕೃತಿಯನ್ನು ಬೆಂಬಲಿಸಲು ಮತ್ತು ದೊಡ್ಡ ಕಾರ್ಯಕ್ರಮಗಳಿಂದ ಪ್ಲಾಸ್ಟಿಕ್ ಬಳಕೆಯನ್ನು ತೊಡೆದುಹಾಕಲು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಮರುಬಳಕೆ ಮಾಡಬಹುದಾದ ಉತ್ಪನ್ನಗಳನ್ನು ಬಳಸಲು ನಿರ್ಧರಿಸಿದೆ. ಕೋವಿಡ್-19 ಸಾಂಕ್ರಾಮಿಕದಿಂದಾಗಿ ಎರಡು ವರ್ಷಗಳ ಬಳಿಕ […]